ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 274 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 274 ವೈದ್ಯಕೀಯ, ಲೀಗಲ್, ಫೈನಾನ್ಸ್ ಆಕ್ಚುರಿಯಲ್, ಆಟೋ ಮೊಬೈಲ್ ಇಂಜಿನಿಯರ್, ಹಿಂದಿ ಅಧಿಕಾರಿಗಳು ಮತ್ತು ಜನರಲಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ22 ಜನೆವರಿ 2024.
ಹುದ್ದೆಗಳ ವಿವರ :
ವೈದ್ಯಕೀಯ, ಲೀಗಲ್ : 28
ಲೀಗಲ್ : 20
ಫೈನಾನ್ಸ್ : 30
ಆಕ್ಚುರಿಯಲ್ : 2
ಮಾಹಿತಿ ತಂತ್ರಜ್ಞಾನ : 20
ಆಟೋ ಮೊಬೈಲ್ ಇಂಜಿನಿಯರ್ : 20
ಹಿಂದಿ ಅಧಿಕಾರಿಗಳು : 22
ಜನರಲಿಸ್ಟ್ : 132
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 1000/-
SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ :250/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹಿಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ : 3 ವರ್ಷ
SC/ST ಮತ್ತು ಮಾಜಿ ಸಾನಿಕ ಅಭ್ಯರ್ಥಿಗಳಿಗೆ : 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments