ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ನ್ಯಾಷನಲ್ ಇನ್ಶೂರೆನ್ಸ್ ಕಂಪನಿ ಲಿಮಿಟೆಡ್ ನಲ್ಲಿ ಖಾಲಿ ಇರುವ 500 ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಆನ್ ಲೈನ್ ಪ್ರಿಲಿಮ್ಸ್, ಮೇನ್ಸ್ ಪರೀಕ್ಷೆ ಮತ್ತು ಪ್ರಾದೇಶಿಕ ಭಾಷಾ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 24-10-2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 11-11-2024
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 11-11-2024
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 850/-
SC/ST ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ :100/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹಿಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳಿಗೆ : 3 ವರ್ಷ
SC/ST ಮತ್ತು ಮಾಜಿ ಸಾನಿಕ ಅಭ್ಯರ್ಥಿಗಳಿಗೆ : 5 ವರ್ಷ
ಅಂಗವಿಕಲ ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗುವಂತೆ 22,405/- ರೂ ಗಳಿಂದ 62,265/- ರೂ ಗಳ ವರೆಗೆ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments