ನ್ಯಾಷನಲ್ ಇನ್ ಸ್ವಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫರ್ಮೇಷನ್ ಟೆಕ್ನಲಾಜಿ (NIELIT) ಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಇನ್ ಸ್ವಿಟ್ಯೂಟ್ ಆಫ್ ಎಲೆಕ್ಟ್ರಾನಿಕ್ಸ್ ಅಂಡ್ ಇನ್ಫರ್ಮೇಷನ್ ಟೆಕ್ನಲಾಜಿ (NIELIT) ಯಲ್ಲಿ ಖಾಲಿ ಇರುವ 80 ಡ್ರಾಪ್ ಮನ್ - ಸಿ, ಲ್ಯಾಬ್ ಅಸಿಸ್ಟೆಂಟ್ ಬಿ, ಮತ್ತು ಲ್ಯಾಬ್ ಅಸಿಸ್ಟೆಂಟ್ ಎ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 31 ಅಕ್ಟೋಬರ್ 2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 80
ಡ್ರಾಪ್ ಮನ್ - ಸಿ - 05
ಲ್ಯಾಬ್ ಅಸಿಸ್ಟೆಂಟ್ ಬಿ - 05
ಲ್ಯಾಬ್ ಅಸಿಸ್ಟೆಂಟ್ ಎ - 20
ಟ್ರೇಡ್ಸ್ ಮನ್ ಬಿ - 26
ಹೆಲ್ಪರ್ ಬಿ - 24
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ಮತ್ತು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ITI/ SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 200/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಅನ್ವಯವಾಗುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಟ 27 ವರ್ಷ ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments