ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಕೌನ್ಸಿಲರ್ ಹುದ್ದೆಗಳಿಗೆ ಒಂದು ವರ್ಷದ ಅವಧಿ ಮೇರೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 01/06/2022 ದಂದು ಬೆಳಿಗ್ಗೆ 10:00 ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.
ಸಂದರ್ಶನ ನಡೆಯುವ ಸ್ಥಳ:
Committee room adjacent to Registrar’s office,
Administrative Block, NIMHANS, BENGALURU – 560 029.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು Psychology/ Social Work from recognized University ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 25,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments