ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ ಮಲ್ಟಿ ಟಾಸ್ಕಿಂಗ್ ಸ್ಟಾಫ್ (MTS) ಹುದ್ದೆಯನ್ನು ಗುತ್ತಿಗೆಯ ಆದರದ ಮೇಲೆ ಒಂದು ವರ್ಷದ ಅವಧಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಈ ಕೆಳಗಿನ ಇ-ಮೇಲ್ ಐಡಿ ಗೆ ದಿನಾಂಕ 18/11/2024 ರೊಳಗಾಗಿ ಸಲ್ಲಿಸಬಹುದಾಗಿದೆ.
ಇ-ಮೇಲ್ ಐಡಿ :
nimhansbrainbank@gmail.com
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯೋಮಿತಿಯನ್ನು ಮೀರಿರಬಾರದು.
ಈ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 18,000/- ರೂಗಳ ವೆರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments