Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ(NIMHANS) ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Yallamma G | Date:5 ಜುಲೈ 2025
not found

ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯು 2025ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ಈ ಅಧಿಸೂಚನೆಯಡಿಯಲ್ಲಿ ಬೆಂಗಳೂರಿನಲ್ಲಿ ಖಾಲಿ ಇರುವ ಒಟ್ಟು14 ಮನೋವೈದ್ಯಕೀಯ ಸಾಮಾಜಿಕ ಕಾರ್ಯಕರ್ತ, ಕ್ಲಿನಿಕಲ್ ಮನಶ್ಶಾಸ್ತ್ರಜ್ಞ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.   


ಅರ್ಹತೆ ಹೊಂದಿರುವ ಮತ್ತು ಉದ್ಯೋಗ ಬಯಸುವ ಆಸಕ್ತ ಅಭ್ಯರ್ಥಿಗಳು ಈ ಅಮೂಲ್ಯ ಅವಕಾಶವನ್ನು ಬಳಸಿಕೊಂಡು ತಮ್ಮ ವೃತ್ತಿಜೀವನವನ್ನು ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಕಟ್ಟಿಕೊಳ್ಳಬಹುದು. 


ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸಂಪೂರ್ಣವಾಗಿ ಆಫ್ ಲೈನ್ ಮೂಲಕ ನಡೆಯಲಿದ್ದು, ಅಭ್ಯರ್ಥಿಗಳು 2025ರ ಜುಲೈ 31ರೊಳಗೆ ಅಥವಾ ಅದಕ್ಕೂ ಮುನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ಅರ್ಜಿ ನಮೂನೆಯನ್ನು ಭರ್ತಿ ಅಂಚೆ ಕಚೇರಿಯ ಮೂಲಕ ಅಥವಾ ಖುದ್ದಾಗಿ ಬಂದು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 


ಹುದ್ದೆಗಳ ವಿವರ : 
ಮನೋವೈದ್ಯಕೀಯ ಸಮಾಜ ಕಾರ್ಯಕರ್ತ : 1 ಸ್ನಾತಕೋತ್ತರ ಪದವಿ , ಎಂ.ಫಿಲ್
ಕ್ಲಿನಿಕಲ್ ಸೈಕಾಲಜಿಸ್ಟ್ : 13 ಎಂಎ, ಎಂ.ಎಸ್ಸಿ, ಎಂ.ಫಿಲ್


ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಈ ಕೆಳಗಿನಂತೆ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದೆ.
ಮನೋವೈದ್ಯಕೀಯ ಸಮಾಜ ಕಾರ್ಯಕರ್ತ : ಸ್ನಾತಕೋತ್ತರ ಪದವಿ , ಎಂ.ಫಿಲ್
ಕ್ಲಿನಿಕಲ್ ಸೈಕಾಲಜಿಸ್ಟ್ : ಎಂಎ, ಎಂ.ಎಸ್ಸಿ, ಎಂ.ಫಿಲ್


ವಯಸ್ಸಿನ ಮಿತಿ: ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 31-ಜುಲೈ-2025 ರಂತೆ 35 ವರ್ಷಗಳು.
ವಯೋಮಿತಿ ಸಡಿಲಿಕೆ:
ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ ಮಾನದಂಡಗಳ ಪ್ರಕಾರ


ಅರ್ಜಿ ಶುಲ್ಕ : 
ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು: ಇಲ್ಲ
SC/ST ಅಭ್ಯರ್ಥಿಗಳು: ರೂ.295/-
ಯುಆರ್/ಒಬಿಸಿ/ಇಡಬ್ಲ್ಯೂಎಸ್ ಅಭ್ಯರ್ಥಿಗಳು: ರೂ.590/-
ಪಾವತಿ ವಿಧಾನ: ಆನ್‌ಲೈನ್


ಆಯ್ಕೆ ಪ್ರಕ್ರಿಯೆ : 
ಲಿಖಿತ ಪರೀಕ್ಷೆ ಮತ್ತು ಸಂದರ್ಶನ


ಅರ್ಜಿ ಸಲ್ಲಿಸುವ ವಿಧಾನ : 
- ಮೊದಲನೆಯದಾಗಿ NIMHANS ನೇಮಕಾತಿ ಅಧಿಸೂಚನೆ 2025 ಅನ್ನು ಸಂಪೂರ್ಣವಾಗಿ ಓದಿ ಮತ್ತು ಅಭ್ಯರ್ಥಿಯು ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂದು ಖಚಿತಪಡಿಸಿಕೊಳ್ಳಿ - ನೇಮಕಾತಿ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.
- ಸಂವಹನ ಉದ್ದೇಶಕ್ಕಾಗಿ ದಯವಿಟ್ಟು ಸರಿಯಾದ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಿ ಮತ್ತು ಐಡಿ ಪ್ರೂಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ಇತ್ತೀಚಿನ  ಛಾಯಾಚಿತ್ರ, ರೆಸ್ಯೂಮ್, ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ.
- ಮೇಲಿನ ಲಿಂಕ್‌ನಿಂದ ಅಥವಾ ಅಧಿಕೃತ ಅಧಿಸೂಚನೆಯಿಂದ ಅರ್ಜಿಯನ್ನು ಡೌನ್‌ಲೋಡ್ ಮಾಡಿ ಮತ್ತು ನಿಗದಿತ ನಮೂನೆಯಲ್ಲಿ ಫಾರ್ಮ್ ಅನ್ನು ಭರ್ತಿ ಮಾಡಿ.
- ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ).
- ಎಲ್ಲಾ ಮಾಹಿತಿಯನ್ನು ಪೂರ್ಣಗೊಳಿಸಿದ ನಂತರ, ಒದಗಿಸಲಾದ ವಿವರಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿ.
- ಕೊನೆಗೆ ಅರ್ಜಿ ನಮೂನೆಯನ್ನು ಈ ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ಅರ್ಜಿ ಸಲ್ಲಿಸುವ ವಿಳಾಸ : 
ರಿಜಿಸ್ಟ್ರಾರ್, ನಿಮ್ಹಾನ್ಸ್, ಪಿಬಿ ಸಂಖ್ಯೆ.2900, ಹೊಸೂರು ರಸ್ತೆ, ಬೆಂಗಳೂರು-560029, (ನಿಗದಿತ ರೀತಿಯಲ್ಲಿ, ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಅಥವಾ ಯಾವುದೇ ಇತರ ಸೇವೆಯ ಮೂಲಕ) ದಿನಾಂಕ 31-ಜುಲೈ-2025 ರಂದು ಅಥವಾ ಅದಕ್ಕೂ ಮೊದಲು ಅರ್ಜಿ ಸಲ್ಲಿಸಬೇಕು.  


ಪ್ರಮುಖ ದಿನಾಂಕಗಳು:
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 01-07-2025
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-ಜುಲೈ-2025

Comments