ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ (Nimhans) ನಲ್ಲಿ ಖಾಲಿ ಇರುವ ಪೋಸ್ಟ್ M.Ch ಹಿರಿಯ ನಿವಾಸಿ ಮತ್ತು ನರಶಸ್ತ್ರಚಿಕಿತ್ಸೆಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆನೇರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 06/01/2025 ರಂದು ಬೆಳ್ಳಿಗೆ 09:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವಾಗ ಅರ್ಜಿ ನಮೂನೆಯನ್ನು ಅಗತ್ಯ ದಾಖಲೆಗಳೊಂದಿಗೆ ಲಗ್ಗತಿಸಿ ಈ ಕೆಳಗಿನ ವಿಳಾಸಕ್ಕೆ ಸಲ್ಲಿಸಬಹುದಾಗಿರುತ್ತದೆ.
ಅರ್ಜಿ ಸಲ್ಲಿಸುವ ವಿಳಾಸ ಮತ್ತು ಸಂದರ್ಶನ ನಡೆಯುವ ಸ್ಥಳ :
Seminar Hall, 1st Floor, Director’s Office,
NIMHANS, Bengaluru – 560029, Karnataka.
ಹುದ್ದೆಗಳ ವಿವರ : 6
ಪೋಸ್ಟ್ M.Ch ಹಿರಿಯ ನಿವಾಸಿ : 3
ನರಶಸ್ತ್ರಚಿಕಿತ್ಸೆಯ ಸಹಾಯಕ ಪ್ರಾಧ್ಯಾಪಕ : 3
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರವಾಗಿ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
ಪೋಸ್ಟ್ M.Ch ಹಿರಿಯ ನಿವಾಸಿ ಹುದ್ದೆಗಳಿಗೆ : 1,770/-
ನರಶಸ್ತ್ರಚಿಕಿತ್ಸೆಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ : 2360/-
SC/ST ಅಭ್ಯರ್ಥಿಗಳಿಗೆ 1180/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಪೋಸ್ಟ್ M.Ch ಹಿರಿಯ ನಿವಾಸಿ : 67,700 - 2,08,700/-
ನರಶಸ್ತ್ರಚಿಕಿತ್ಸೆಯ ಸಹಾಯಕ ಪ್ರಾಧ್ಯಾಪಕ : 1,01,500 – 1,67,400 /-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments