ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (NIRDPR)ಯಲ್ಲಿ ಖಾಲಿ ಇರುವ ಯಂಗ್ ಫೆಲೋ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ (NIRDPR) ಹೈದರಾಬಾದ್, ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ರಾಷ್ಟ್ರೀಯ ಸಂಸ್ಥೆಯಾಗದೆ. ಪ್ರಸ್ತುತ ಯಂಗ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 08 ಮೇ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದಾಲಯದಿಂದ SSLC/ PUC/ ಡಿಪ್ಲೊಮಾ ಹಾಗೂ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 300/- ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.
SC/ ST/ PWD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಗರಿಷ್ಠ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 35,000/- ಮಾಸಿಕ ವೇತನವನ್ನು ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments