ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ, (NIT) ಕ್ಯಾಲಿಕಟ್ ಇಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(NIT)ಕ್ಯಾಲಿಕಟ್ ದಲ್ಲಿ ಖಾಲಿ ಇರುವ 16 ಟೆಕ್ನಿಕಲ್ ಅಸಿಸ್ಟೆಂಟ್, ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 28 ಮಾರ್ಚ್ 2024 ಹಾಗೂ ಕೊನೆಯ ದಿನಾಂಕ08 ಏಪ್ರಿಲ್ 2024 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 16
ಟೆಕ್ನಿಕಲ್ ಅಸಿಸ್ಟೆಂಟ್ - 12
ಸೀನಿಯರ್ ಟೆಕ್ನಿಕಲ್ ಅಸಿಸ್ಟೆಂಟ್ - 04
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ಮತ್ತು ಟ್ರೇಡ್ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma/ BCA/ B.Sc/ BE/ B.Tech/ MCA/ M.Sc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಟ 55 ವರ್ಷ ವಯಸ್ಸು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 30,000/- ರೂ ಗಳಿಂದ 35,000/- ರೂ ಗಳ ವೆರೆಗೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments