ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಸಿಲ್ಚಾರ್(NIT)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(NIT)ದಲ್ಲಿ ಖಾಲಿ ಇರುವ 109 ಗ್ರಂಥಪಾಲಕ, ರಿಜಿಸ್ಟ್ರಾರ್, ಮತ್ತು ತಾಂತ್ರಿಕ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17 ಜುಲೈ 2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುB.E/B.Tech. M.scವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1,000/- ರೂ ಅರ್ಜಿ ಶುಲ್ಕ ಹಾಗೂ
SC/ST/ PWD ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ .
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 27 ವರ್ಷ ಹಾಗೂ ಗರಿಷ್ಟ 56 ವರ್ಷ ವಯಸ್ಸು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ 14 ನೇ ವೇತನ ಶ್ರೇಣಿ ಆಧಾರದ ಮೇಲೆ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments