ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ರಾಷ್ಟೀಯ ತಾಂತ್ರಿಕ ಮಹಾವಿದ್ಯಾಲಯ ಕರ್ನಾಟಕ (NITK)ದಲ್ಲಿ ಖಾಲಿ ಇರುವ 112 ಬೋಧಕ ಸಿಬ್ಬಂದಿನೇಮಕಾತಿಗಾಗಿ ಹುದ್ದೆಗಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 06 ಸೆಪ್ಟೆಂಬರ್ 2023 ರೊಳಗೆ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 112
ಸುಪರಿಂಟೆಂಡೆಂಟ್ - 04
ಹಿರಿಯ ತಂತ್ರಜ್ಞ - 18
ಹಿರಿಯ ಸಹಾಯಕ - 11
ತಂತ್ರಜ್ಞ - 35
ಕಿರಿಯ ಸಹಾಯಕ - 23
ಆಫೀಸ್ ಅಟೆಂಡೆಂಟ್ - 21
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ಮತ್ತು ಭೌತಿಕ ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 1,000/- ರೂ ಅರ್ಜಿ ಶುಲ್ಕ & SC/ST ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ .
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 27 ವರ್ಷ ಹಾಗೂ ಗರಿಷ್ಟ 33 ವರ್ಷ ವಯಸ್ಸು ಮೀರಿರಬಾರದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿಗಾಗಿ ಅಭ್ಯರ್ಥಿಗಳು ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಯನ್ನು ಪಡೆಯಬಹುದಾಗಿದೆ.





Comments