NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 295 ಮೆಕ್ಯಾನಿಕಲ್, ಎಕೆಲ್ಟ್ರಾನಿಕಲ್, ಸಿವಿಲ್ ಮತ್ತು ಕಂಪ್ಯೂಟರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 21-12-2023 ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ : 295
ಮೆಕ್ಯಾನಿಕಲ್ - 120
ಎಕೆಲ್ಟ್ರಾನಿಕಲ್ - 109
ಸಿವಿಲ್ - 28
ಮೈನಿಂಗ್ - 17
ಕಂಪ್ಯೂಟರ್ - 21
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
- ಎಸ್‌ಸಿ/ ಎಸ್‌ಟಿ/ ಪಿಡಬ್ಲ್ಯೂಬಿಡಿ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 354 /- ರೂ ಅರ್ಜಿ ಶುಲ್ಕ ಹಾಗೂ
- OBC/ EWS ಅಭ್ಯರ್ಥಿಗಗಳು 854 /- ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಹೆಚ್ಚಿನ ಮಾಹಿತಿಯಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 2023 ನವೆಂಬರ್ 1 ಕ್ಕೆ ಅನುಗುಣವಾಗಿವಂತೆ ಅಭ್ಯರ್ಥಿಗಳು ಕನಿಷ್ಠ 30 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 33 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 50,000/- ರಿಂದ 1,60,000/- ರೂ ಗಳವರೆಗೆ ಮಾಸಿಕ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments