NLC ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ನೈವೇಲಿ ಲಿಗ್ನೈಟ್ ಕಾರ್ಪೊರೇಷನ್ ( NLC ) ಇಂಡಿಯಾ ಲಿಮಿಟೆಡ್ ಭಾರತ ಸರ್ಕಾರದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನವರತ್ನ ಕಂಪನಿಯಾಗಿದ್ದು, ಪ್ರಸ್ತುತ ಉದ್ಯಮದಲ್ಲಿ ಖಾಲಿ ಇರುವ 168 ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ಮತ್ತು ಫಾರ್ಮಾಸಿಸ್ಟ್/ Gr-B ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತೀಯ ಪ್ರಜೆ ಯಾಗಿರಬೇಕು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ.
ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು :
UR/ EWS/ OBC (NCL) ಅಭ್ಯರ್ಥಿಗಳಿಗೆ: ₹854/-
SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹354/-
ಫಾರ್ಮಾಸಿಸ್ಟ್/ Gr-B ಟ್ರೈನಿ ಹುದ್ದೆಗಳು:
UR/ EWS/ OBC (NCL) ಅಭ್ಯರ್ಥಿಗಳಿಗೆ: ₹486/-
SC/ ST/ PwBD/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ₹236/-
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ ವಯೋಮಿತಿಗಳನ್ನು ಈ ಕೆಳಗಿನಂತಿವೆ.
ವಯೋಮಿತಿ ಸಡಿಲಿಕೆ:
ಸಾಮಾನ್ಯ ವರ್ಗಕ್ಕೆ ಗರಿಷ್ಠ ವಯಸ್ಸು : 30 ವರ್ಷಗಳು
ವರ್ಗ 2A, 2B, 3A, ಮತ್ತು 3B ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು : 33
SC/ST ಮತ್ತು ವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯಸ್ಸು : 35
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.
ಗ್ರಾಜುಯೇಟ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳು : 50,000/- ರಿಂದ 1,60,000/-
ಫಾರ್ಮಾಸಿಸ್ಟ್/ Gr-B ಟ್ರೈನಿ ಹುದ್ದೆಗಳು : 21000/- ರಿಂದ 85000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments