Loading..!

ಅಣುಶಕ್ತಿ ನಿಗಮದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Savita Halli | Date:18 ಜೂನ್ 2022
not found

ದೇಶದ ಪ್ರಮುಖ ಅಣು ವಿದ್ಯುತ್ ಶಕ್ತಿ ಸ್ಥಾವರಗಳಲ್ಲಿ ಒಂದಾಗಿರುವ ಪ್ರಮುಖ ಸಾರ್ವಜನಿಕ ವಲಯದ  ಉದ್ಯಮವಾಗಿರುವ ನ್ಯೂಕ್ಲಿಯರ್ ಪವರ್ ಕಾರ್ಪೋರೇಷನ್ ಆಫ್ ಇಂಡಿಯಾ (NPCIL) ದ ಗುಜರಾತ್ ಘಟಕದಲ್ಲಿ ತರಬೇತಿ ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/07/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 177
* ಎಲೆಕ್ಟ್ರಿಷಿಯನ್ - 47
* ಫಿಟ್ಟರ್ -47 
* ಇನ್‌ಸ್ಟುಮೆಂಟ್ ಮೆಕಾನಿಕ್ - 18
* ಎಲೆಕ್ಟ್ರಾನಿಕ್ ಮೆಕಾನಿಕ್ - 18
* ಪಿಎಸ್‌ಎಎ / ಸಿಓಪಿಎ - 10
* ವೆಲ್ಡರ್ - 10
* ಟರ್ನರ್ - 10
* ಮೆಷಿನಿಸ್ಟ್ - 08
* ಕಂಡೀಷನ್ ಮೆಕ್ಯಾನಿಕ್ - 09
ಅರ್ಜಿ ಸಲ್ಲಿಸಬೇಕಾದ ವಿಳಾಸ:
Deputy Manager( HRM ),
NUCLEAR POWER CORPORATION OF INDIA LIMITED,
Anumala - 394651, Ta. Vyara, Dist. Tapi, Gujarat 

No. of posts:  177
Application Start Date:  18 ಜೂನ್ 2022
Application End Date:  15 ಜುಲೈ 2022
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಐಟಿಐ ಅಂಕ ಆಧರಿಸಿ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. 
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಮಾನ್ಯತೆ ಪಡೆದ ಸಂಸ್ಥೆಯಿಂದ ITI ಪಾಸಾಗಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: * ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 500 ರೂ. ಅರ್ಜಿ ಶುಲ್ಕ ಪಾವತಿಸಬೇಕು.
* SC/ ST, ಅಂಗವಿಕಲ, ಮಾಜಿ ಸೈನಿಕ, ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿಶುಲ್ಕದಿಂದ ವಿನಾಯಿತಿ ನೀಡಲಾಗಿದೆ
Age Limit: * ಈ ಹುದ್ದೆಗಳಿಗೆ 15.7.2022 ಕ್ಕೆ ಅನ್ವಯವಾಗುವಂತೆ 14 ವರ್ಷದಿಂದ 24 ವರ್ಷ ವಯಸ್ಸಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* SC/ ST ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ.
Pay Scale:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 7,700 /-ದಿಂದ 8,855/- ರವರೆಗೆ ಮಾಸಿಕ ಸ್ಟೈಪೆಂಡ್ ನೀಡಲಾಗುವುದು.

- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
To Download Official Notification

Comments