ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಅಹ್ವಾನ

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 06 ಜನೇವರಿ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 89
ನರ್ಸ್ - 04
ಸ್ಟೈಪೆಂಡಿಯರ್ ಟ್ರೈನಿ / ಸೈನ್ಟಿಫಿಕ್ ಅಸಿಸ್ಟೆಂಟ್ - 28
ಫಾರ್ಮಸಿಸ್ಟ್ - 01
ಆಪರೇಷನ್ ಥಿಯೇಟರ್ ಅಸಿಸ್ಟೆಂಟ್ - 01
ಸ್ಟೈಪೆಂಡಿಯರ್ ಟ್ರೈನಿ / ಟೆಕ್ನಿಷಿಯನ್ - 32
ಅಸಿಸ್ಟೆಂಟ್ ಗ್ರೇಡ್ - 08
ಅಸಿಸ್ಟೆಂಟ್ ಗ್ರೇಡ್ (ಸಿ ಯಾಂಡ್ ಎಂಎಂ) - 07
ಸ್ಟೆನೋ ಗ್ರೇಡ್ - 05
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸ್ಟೈಪೆಂಡಿಯರ್ ಟ್ರೈನಿ / ಸೈನ್ಟಿಫಿಕ್ ಅಸಿಸ್ಟೆಂಟ್ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ವಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಇನ್ನುಳಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮತ್ತು ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಸಂಬಂಧಿಸಿದ ಹುದ್ದೆಗಳಿಗೆ ಅನುಗುಣವಾಗುವಂತೆ ಡಿಪ್ಲೊಮಾ/ BSC/ ITI ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 30 ವರ್ಷ ವಯಸ್ಸನ್ನು ಹೊಂದಿರಬೇಕಾಗುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 16000 /- ರೂ ರಿಂದ 44900 /- ರೂ ವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments