ನೇವಲ್ ಶಿಪ್ ರಿಪೇರ್ ಯಾರ್ಡ್ (NSRY)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೇವಲ್ ಶಿಪ್ ರಿಪೇರ್ ಯಾರ್ಡ್ (NSRY)ನಲ್ಲಿ ಖಾಲಿ ಇರುವ ಒಟ್ಟು 180 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕಾರ್ಪೆಂಟರ್, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್, ಫಿಟ್ಟರ್, ಮೆಕ್ಯಾನಿಕ್ (ಡೀಸೆಲ್) ಮತ್ತು ವೆಲ್ಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ದಿನಾಂಕ 15 ನವೆಂಬರ್ 2023 ರೊಳಗೆ ಅರ್ಜಿ ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 180
ಕಾರ್ಪೆಂಟರ್ - 14
ಎಲೆಕ್ಟ್ರಿಷಿಯನ್ - 25
ಎಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ - 25
ಫಿಟ್ಟರ್ - 25
ಮೆಕ್ಯಾನಿಕ್ (ಡೀಸೆಲ್) - 16
ವೆಲ್ಡರ್- 12
ಇತರ - 63
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಐಟಿಐ ನಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮತ್ತು ಪೂರ್ವಭಾವಿ ಮೆರಿಟ್ ಪಟ್ಟಿಯಲ್ಲಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ನಡೆಸುವದರ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC ಹಾಗೂ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 14 ವರ್ಷ ಗರಿಷ್ಠ 21 ವರ್ಷ ವಯೋಮಿತಿಯನ್ನು ಮೀರಿರಬಾರದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 2,500/- ರೂ ಗಳಿಂದ 8,050/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ





Comments