ರಾಷ್ಟ್ರೀಯ ಉಷ್ಣಶಕ್ತಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ರಾಷ್ಟ್ರೀಯ ಉಷ್ಣಶಕ್ತಿ ನಿಗಮ ನಿಯಮಿತ(NTPC)ದಲ್ಲಿ ಖಾಲಿ ಇರುವ 55 ಎಕ್ಸಿಕ್ಯೂಟಿವ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 08/04/2022 ರೊಳಗೆ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದು.
ಒಟ್ಟು ಹುದ್ದೆಗಳ ವಿವರ: 55
* ಎಕ್ಸಿಕ್ಯೂಟಿವ್
- ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್ ಓ ಅಂಡ್ ಎಂ - 50
- ಅಪರೇಷನ್ಸ್ ಪವರ್ ಟ್ರೇಡಿಂಗ್ - 04
- ಬಿಡಿ ಪವರ್ ಟ್ರೇಡಿಂಗ್ - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ Engineering ಪದವಿಯನ್ನು ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
- ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ರೂ. 300/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC/ST, ಅಂಗವಿಕಲ, ಮಾಜಿ ಸೈನಿಕ, ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.90,000/-ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. ಜೊತೆಗೆ ಮನೆಬಾಡಿಗೆ ಭತ್ಯೆ, ವೈದ್ಯಕೀಯ ಸೌಲಭ್ಯ, ಹಾಗೂ ಇತರೆ ಭತ್ಯೆಯನ್ನು ನೀಡಲಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments