ರಾಷ್ಟ್ರೀಯ ಉಷ್ಣ ಶಕ್ತಿ ನಿಗಮ(NTPC)ದಲ್ಲಿ ಖಾಲಿ ಇರುವ 864 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ I ಕೂಡಲೇ ಅರ್ಜಿ ಸಲ್ಲಿಸಿ

ನ್ಯಾಷನಲ್ ಥರ್ಮಲ್ ಪವರ್ ಕಾರ್ಪೋರೇಶನ್ ಲಿಮಿಟೆಡ್(NTPC) ನಲ್ಲಿ ಖಾಲಿ ಇರುವ 864 ಇಂಜಿನಿಯರಿಂಗ್ ಎಕ್ಸಿಕ್ಯೂಟಿವ್ ಟ್ರೈನಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 11/11/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಭಾರತೀಯ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು BE/ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಿದ್ಯಾರ್ಹತೆಯನ್ನು ಶೇ 65 ಅಂಕಗಳೊಂದಿಗೆ ಪಾಸಾಗಿರಬೇಕು
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳಿಗೆ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುತ್ತದೆ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ40,000/- ರಿಂದ 1,40,000/-ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments