Loading..!

ರಾಷ್ಟ್ರೀಯ ಉಷ್ಣ ಶಕ್ತಿ ನಿಗಮ(NTPC)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ I ಕೂಡಲೇ ಅರ್ಜಿ ಸಲ್ಲಿಸಿ
Published by: Tajabi Pathan | Date:21 ನವೆಂಬರ್ 2022
not found

ರಾಷ್ಟ್ರೀಯ ಉಷ್ಣ ಶಕ್ತಿ ನಿಗಮ(NTPC)ದಲ್ಲಿ ಖಾಲಿ ಇರುವ 26 ಕಾರ್ಯನಿರ್ವಾಹಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ30/11/2022 ರೊಳಗಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 26
ಕಾರ್ಯನಿರ್ವಾಹಕ (ಸಂಯೋಜಿತ ಸೈಕಲ್ ಪವರ್ ಪ್ಲಾಂಟ್) 25
ಕಾರ್ಯನಿರ್ವಾಹಕ (ರೀ-ವಿಂಡ್ಸ್) 1

No. of posts:  26
Application Start Date:  16 ನವೆಂಬರ್ 2022
Application End Date:  30 ನವೆಂಬರ್ 2022
Work Location:  ಭಾರತದಾದ್ಯಂತ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 
- ಕಾರ್ಯನಿರ್ವಾಹಕ (ಸಂಯೋಜಿತ ಸೈಕಲ್ ಪವರ್ ಪ್ಲಾಂಟ್) : ಎಲೆಕ್ಟ್ರಿಕಲ್/ಮೆಕ್ಯಾನಿಕಲ್/ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಪದವಿ
- ಕಾರ್ಯನಿರ್ವಾಹಕ (RE-Winds) : ಎಂಜಿನಿಯರಿಂಗ್‌ನಲ್ಲಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ  ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ/EWS/OBC ಅಭ್ಯರ್ಥಿಗಳು: ರೂ.300/- ಅರ್ಜಿ ಶುಲ್ಕ ಪಾವತಿಸಬೇಕು.
- SC/ST/PwBD/XSM ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವದಿಲ್ಲ.
- ಅರ್ಜಿ ಶುಲ್ಕವನ್ನು ಆಫ್‌ಲೈನ್/ಆನ್‌ಲೈನ್ ಪಾವತಿಸಬಹುದಾಗಿದೆ. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಭ್ಯರ್ಥಿಯ ಗರಿಷ್ಠ ವಯಸ್ಸು 35 ವರ್ಷಗಳು ವಯೋಮಿತಿಯನ್ನು ಹೊಂದಿರಬೇಕು. 
OBC ಅಭ್ಯರ್ಥಿಗಳಿಗೆ : 03 ವರ್ಷಗಳು
SC/ST ಅಭ್ಯರ್ಥಿಗಳಿಗೆ : 05 ವರ್ಷಗಳು
PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ 90,000/- ನಿಗದಿ ಪಡಿಸಲಾಗುತ್ತದೆ.  
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments