ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತದ ಅತಿ ದೊಡ್ಡ ಇಂಧನ ಸಂಸ್ಥೆಯಾದ ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC)ನಲ್ಲಿ ಖಾಲಿ ಇರುವನಿರ್ವಹಣೆಯ ಮುಖ್ಯಸ್ಥ, ಶಿಫ್ಟ್ ಚಾರ್ಜ್ ಎಂಜಿನಿಯರ್‌ಗಳು, ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 09 ಆಗಸ್ಟ್ 2024. ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಈ ಹುದ್ದೆಗಳಿಗೆ ಅರ್ಜಿಸಲ್ಲಿಸಬಹುದು.
ಹುದ್ದೆಗಳ ವಿವರ :
ನಿರ್ವಹಣೆಯ ಮುಖ್ಯಸ್ಥ : 1
ಶಿಫ್ಟ್ ಚಾರ್ಜ್ ಎಂಜಿನಿಯರ್‌ಗಳು : 2
ಕಾರ್ಯನಿರ್ವಾಹಕ : 5
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 300/-ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ST/PwBD/ಮಾಜಿ ಸೈನಿಕ ಅಭ್ಯರ್ಥಿಗಳು ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನ ನಿಗದಿಪಡಿಸಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments