ರಾಷ್ಟ್ರೀಯ ಜಲಾನಯನ ಅಭಿವೃದ್ಧಿ ಏಜೆನ್ಸಿ (NWDA)ಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಜಲ ಶಕ್ತಿ ಸಚಿವಾಲಯದ ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿರುವ, ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿಯಲ್ಲಿ (NWDA) ಸಹಾಯಕ ಇಂಜಿನಿಯರ್ (ಗುಂಪು 'ಬಿ') ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 09
- ಸಹಾಯಕ ಇಂಜಿನಿಯರ್ - 09
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅವರು ಗೇಟ್ 2020 & 21 (ಗ್ರಾಜುಯೇಟ್ ಆಪ್ಟಿಟ್ಯೂಡ್ ಟೆಸ್ಟ್ ಇನ್ ಇಂಜಿನಿಯರಿಂಗ್) ಪರೀಕ್ಷೆಗಳಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ, ನಂತರ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು B.E / B.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಹಾಗೂ OBC ಅಭ್ಯರ್ಥಿಗಳಿಗೆ ರೂ. 840/- ಮತ್ತು
* SC / EWS / ಮಹಿಳಾ ಅಭ್ಯರ್ಥಿಗಳಿಗೆ ರೂ. 500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗೆ ಕನಿಷ್ಠ 21 ವರ್ಷ ಆಗಿರಬೇಕು.
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 27 ವರ್ಷ, ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 30 ವರ್ಷ ಮೀರಿರಬಾರದು.
* SC / ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.
ಈ ಹುದ್ದೆಗಳಿಗೆ ಆಯ್ಕೆ ಆದ ಅಭ್ಯರ್ಥಿಗಳಿಗೆ ಮಾಸಿಕ ರೂ. 44,900/--1,42,400/- ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments