Loading..!

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇಲ್ಲಿ ಖಾಲಿ ಇರುವ ಸುಮಾರು 2814 ವಿವಿಧ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
| Date:17 ಡಿಸೆಂಬರ್ 2019
not found
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟ, ಬೆಳಗಾವಿ, ಚಿಕ್ಕೋಡಿ, ಹುಬ್ಬಳ್ಳಿ, ಹುಬ್ಬಳ್ಳಿ-ಧಾರವಾಡ ನಗರ ಸಾರಿಗೆ, ಧಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ವಿಭಾಗ ಶಿರಸಿಯಲ್ಲಿ ಖಾಲಿ ಇರುವ ಈ ಕೆಳಕಂಡ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ

ಚಾಲಕ - 2500 ಹುದ್ದೆಗಳು
ಚಾಲಕ (ಪಜಾ ಹಿಂಬಾಕಿ) - 55 ಹುದ್ದೆಗಳು
ಚಾಲಕ ಕಂ ನಿರ್ವಾಹಕ (ಪಜಾ ಹಿಂಬಾಕಿ) - 259 ಹುದ್ದೆಗಳು
ಒಟ್ಟು ಖಾಲಿ ಇರುವ ಹುದ್ದೆಗಳು - 2814

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವ್ಯಾಪ್ತಿಯಲ್ಲಿ ಬರುವ ಘಟಕಗಳಲ್ಲಿ ಕಾರ್ಯನಿರ್ವಹಿಸಲು ಇಚ್ಛೆಯುಳ್ಳ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ದಿನಾಂಕ 10 ಡಿಸೆಂಬರ್ 2019 ರಿಂದ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ದಿನಾಂಕ 08 ಜನವರಿ 2020 ರಂದು (ಸಾಯಂಕಾಲ 5:30) ಕೊನೆಯ ದಿನವಾಗಿರುತ್ತದೆ.
No. of posts:  2814
Application Start Date:  10 ಡಿಸೆಂಬರ್ 2019
Application End Date:  8 ಜನವರಿ 2020
Work Location:  ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಿಭಾಗಗಳ ವ್ಯಾಪ್ತಿ
Qualification: ಚಾಲಕ ಹುದ್ದೆಗೆ : ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು SSLC ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಚಾಲ್ತಿ ಇರುವ ಭಾರಿ ಸರಕು ಸಾಗಾಣಿಕೆ ವಾಹನ ಚಾಲನಾ ಪರವಾನಿಗೆ ಜೊತೆಗೆ ಕರ್ನಾಟಕ PSV ಬ್ಯಾಡ್ಜ್ ಹೊಂದಿರಬೇಕು.

ಚಾಲಕ ಕಂ ನಿರ್ವಾಹಕ ಹುದ್ದೆಗಳಿಗೆ : ಅಭ್ಯರ್ಥಿಗಳು SSLC ಅಥವಾ ತತ್ಸಮಾನ ವಿದ್ಯಾರ್ಹತೆ ತೇರ್ಗಡೆಯಾಗಿರಬೇಕು. ಜೊತೆಗೆ ಭಾರಿ ಸರಕು ಸಾಗಾಣಿಕೆ ವಾಹನ ಪರವಾನಿಗೆ ಜೊತೆ ಕರ್ನಾಟಕ PSV ಬ್ಯಾಡ್ಜ್ ಮತ್ತು ಚಾಲ್ತಿ ಇರುವ ನಿರ್ವಾಹಕ ಪರವಾನಿಗೆ ಮತ್ತು ಕರ್ನಾಟಕ ಬ್ಯಾಡ್ಜ್ ಹೊಂದಿರಬೇಕು.
Fee: * ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ಮಾಜಿ ಸೈನಿಕ ಮತ್ತು ಅಶಕ್ತ ಮಾಜಿ ಸೈನಿಕರ ಅವಲಂಬಿತರಿಗೆ ರೂಪಾಯಿ 300/-
* ವರ್ಗ 2A 2B 3A 3B ಮತ್ತು ಸಾಮಾನ್ಯ ಅಭ್ಯರ್ಥಿಗಳಿಗೆ ರೂಪಾಯಿ 600/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 24 ವರ್ಷಗಳು ತುಂಬಿರಬೇಕು ಹಾಗೂ ಗರಿಷ್ಠ ವಯೋಮಿತಿ
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 40 ವರ್ಷಗಳು
* ಪ್ರವರ್ಗ 2A 2B 3A 3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು ಮತ್ತು
* ಎಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Pay Scale: ತರಬೇತಿ ಅವಧಿ (2 ವರ್ಷ )
* ಚಾಲಕ ಹುದ್ದೆಗಳಿಗೆ 10,000/-
* ಚಾಲಕ ಕಂ ನಿರ್ವಾಹಕ ಹುದ್ದೆಗೆ 9100/-

ಎರಡು ವರ್ಷಗಳ ಕೆಲಸದ ಮೇಲೆ ತರಬೇತಿ ಅವಧಿಯನ್ನು ತೃಪ್ತಿಕರವಾಗಿ ಪೂರೈಸಿದಲ್ಲಿ ಈ ಕೆಳಕಂಡ ವೇತನ ಶ್ರೇಣಿ ನೀಡಲಾಗುವುದು ಚಾಲಕ ಮತ್ತು ಚಾಲಕ ಕಂ ನಿರ್ವಾಹಕ : 12400/- ರಿಂದ 19550/-
to visit official complete NWKRTC notification
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments