Loading..!

ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Diploma
Published by: Yallamma G | Date:31 ಜುಲೈ 2023
not found

ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)ದಲ್ಲಿ ಖಾಲಿ ಇರುವ 69 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ  ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬಹುದು.  
ಆಸಕ್ತ ಅಭ್ಯರ್ಥಿಗಳು ದಿನಾಂಕ 07/08/2023 ರಿಂದ 12/08/2023 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಹುದ್ದೆಗಳ ವಿವರ :
 Electrical Supervisor 4
 Assistant Rig Electrician 8
 Assistant Fitter 2
 Assistant Diesel Mechanic 3
 Rig Maintenance Assistant 10
 Assistant Mechanic Pump/ Assistant Mechanic-ICE 42

No. of posts:  69
Application Start Date:  31 ಜುಲೈ 2023
Application End Date:  7 ಆಗಸ್ಟ್ 2023
Work Location:  ಭಾರತದಾದ್ಯಂತ
Selection Procedure: ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಮೂಲ ದಾಖಲಾತಿ ಪರಿಶೀಲನೆ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ Diploma, ಹಾಗೂ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. 

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 38
SC / ST ಅಭ್ಯರ್ಥಿಗಳಿಗೆ : 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16, 640/- ರೂಗಳಿಂದ 19,500/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. 
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments