ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)ದಲ್ಲಿ ಖಾಲಿ ಇರುವ 10 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ದಿನಾಂಕ : 28/04/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ ಮತ್ತು ವ್ಯಯಕ್ತಿಕ ಮೌಲ್ಯಮಾಪನ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ SSLC, Diploma, ಹಾಗೂ Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 20 ವರ್ಷಗಳನ್ನು ಪೂರೈಸಿರಬೇಕು.
ಮೀಸಲಾತಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಲಿಕೆ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 16, 640/- ರೂಗಳಿಂದ 19,500/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿಪಡೆಯಬಹುದಾಗಿದೆ.





Comments