ಆಯಿಲ್ ಇಂಡಿಯಾ ಲಿಮಿಟೆಡ್ (ಭಾರತೀಯ ತೈಲ ನಿಗಮ) ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಪರಿಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನೆ, ಕಚ್ಚಾ ತೈಲ ಸಾಗಣೆ ಮತ್ತು ಎಲ್‌ಪಿಜಿ ಉತ್ಪಾದನೆಯಲ್ಲಿ ತೊಡಗಿರುವ ಪ್ರಮುಖ ಭಾರತೀಯ ರಾಷ್ಟ್ರೀಯ ತೈಲ ಕಂಪನಿ ಆಯಿಲ್ ಇಂಡಿಯಾ ಲಿಮಿಟೆಡ್ (IOL)ದಲ್ಲಿ ಖಾಲಿ ಇರುವ 24 ಅಸಿಸ್ಟೆಂಟ್ ಫೈಟರ್ ಮತ್ತು ಅಸಿಸ್ಟೆಂಟ್ ಡೀಸೆಲ್ ಮೆಕ್ಯಾನಿಕ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಕೌಶಲ ಪರೀಕ್ಷೆ ಮತ್ತು ನೇರ ಸಂದರ್ಶನ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಸಿಸ್ಟೆಂಟ್ ಫೈಟರ್ ಹುದ್ದೆಗಳಿಗೆ 20 ಆಗಸ್ಟ್ 2024 ರಂದು ಹಾಗೂ ಅಸಿಸ್ಟೆಂಟ್ ಡೀಸೆಲ್ ಮೆಕ್ಯಾನಿಕ್ ಹುದ್ದೆಗಳಿಗೆ ದಿನಾಂಕ 22 ಆಗಸ್ಟ್ 2024 ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ. ಸಂದರ್ಶನ ನಡೆಯುವ ಸ್ಥಳ ಮತ್ತು ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಸಂದರ್ಶನ ನಡೆಯುವ ಸ್ಥಳ :
Employee Welfare Office, Nehru Maidan,
Oil India Limited, Duliajan, Assam
ಹುದ್ದೆಗಳ ವಿವರ : 24
ಅಸಿಸ್ಟೆಂಟ್ ಫೈಟರ್ - 14
ಅಸಿಸ್ಟೆಂಟ್ ಡೀಸೆಲ್ ಮೆಕ್ಯಾನಿಕ್ - 10
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗುವಂತೆ SSLC, ITI, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ : 36
SC / ST ಅಭ್ಯರ್ಥಿಗಳಿಗೆ : 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments