ತೈಲ ಮತ್ತು ನೈಸರ್ಗಿಕ ಅನಿಲ ನಿಗಮ (ONGC)ದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನ
Published by: Rukmini Krushna Ganiger | Date:27 ಸೆಪ್ಟೆಂಬರ್ 2021

- ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಒಡೆತನದಲ್ಲಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC) ದಲ್ಲಿ ಖಾಲಿ ಇರುವ 313 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ನೋಂದಣಿ-ಕಮ್-ಅರ್ಜಿ ಪ್ರಕ್ರಿಯೆಯು ದಿನಾಂಕ : 22/ಸೆಪ್ಟೆಂಬರ್/2021 ರಿಂದ ಪ್ರಾರಂಭವಾಗಿ ದಿನಾಂಕ: 12/ಅಕ್ಟೋಬರ್/2021ರಂದು ಕೊನೆಗೊಳ್ಳಲಿದೆ.
No. of posts: 313
Application Start Date: 22 ಸೆಪ್ಟೆಂಬರ್ 2021
Application End Date: 12 ಅಕ್ಟೋಬರ್ 2021
Work Location: India
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ, ಸಂಬಂಧಿತ ವಿಭಾಗದಲ್ಲಿ ಗೇಟ್ 2020 ಸ್ಕೋರ್ ಆಧರಿಸಿ ಕಿರುಪಟ್ಟಿಯನ್ನು ಮಾಡಿ ತದನಂತರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
- ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ/ಬೋರ್ಡ್ ಯಿಂದ ಹುದ್ದೆಗಳಿಗೆ ಇಂಜಿನಿಯರಿಂಗ್ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಜೊತೆಗೆ ಗೇಟ್ 2020 ಪರೀಕ್ಷೆಯಲ್ಲಿ ಅರ್ಹತೆಯನ್ನು ಪಡೆದಿರಬೇಕು.
Fee: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೋಂದಣಿ ಶುಲ್ಕವಾಗಿ 300/-ರೂ ಅನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಎಸ್‌ಸಿ/ಎಸ್‌ಟಿ ಮತ್ತು ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳು ಲೇಖನದ ಕೊನೆಯಲ್ಲಿ ನೀಡಿರುವ ಅಧಿಕೃತ ಒಎನ್‌ಜಿಸಿ ಜಿಟಿ ಅಧಿಸೂಚನೆ 2021 ರಲ್ಲಿ ಉಲ್ಲೇಖಿಸಿರುವಂತೆ ನೋಂದಣಿ ಶುಲ್ಕವನ್ನು ಪಾವತಿಸುವುದರಿಂದ ವಿನಾಯಿತಿ ನೀಡಲಾಗಿದೆ.
Pay Scale:
- ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಅಧಿಸೂಚನೆ ಅನ್ವಯ ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments