Loading..!

ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:13 ಜನವರಿ 2025
not found

ಭಾರತ ಸರ್ಕಾರದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಒಡೆತನದಲ್ಲಿರುವ ಭಾರತೀಯ ಸರ್ಕಾರಿ ಸ್ವಾಮ್ಯದ ತೈಲ ಮತ್ತು ನೈಸರ್ಗಿಕ ಅನಿಲ ನಿಗಮ(ONGC) ದಲ್ಲಿ ಖಾಲಿ ಇರುವ 108 ಜೋಯೋಲಜಿಸ್ಟ್, AEE ಮೆಕ್ಯಾನಿಕ್, AEE ಎಲೆಕ್ಟ್ರಿಕಲ್, ಇಂಜಿನಿಯರ್ ಮತ್ತು ಗೇಯೋಫಿಸಿಷಿಸ್ಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  108
Application Start Date:  11 ಜನವರಿ 2025
Application End Date:  24 ಜನವರಿ 2025
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.
Qualification: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.Sc, M.Tech, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಕನಿಷ್ಠ 60% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಸೇವಾ ಅನುಭವವನ್ನು ಹೊಂದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ, EWS, OBC ಅಭ್ಯರ್ಥಿಗಳಿಗೆ ₹1,000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ, SC/ST/PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:

ಈ ಹುದ್ದೆಗಳಿಗೆ ಅನುಗುಣವಾಗಿ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ. 
ಜಿಯೋಸೈನ್ಸ್ ಡಿಸ್ಸಿಪ್ಲಿನ್ಸ್ ಹುದ್ದೆಗಳಿಗೆ ಗರಿಷ್ಠ : 26 ವರ್ಷ 
ಇಂಜಿನಿಯರಿಂಗ್ ಹುದ್ದೆಗಳಿಗೆ ಗರಿಷ್ಠ : 27 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. 
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 3 ವರ್ಷಗಳು
SC, ST ಅಭ್ಯರ್ಥಿಗಳು: 5 ವರ್ಷಗಳು
PWBD (ಸಾಮಾನ್ಯ/EWS) ಅಭ್ಯರ್ಥಿಗಳು: 10 ವರ್ಷಗಳು
PWBD (OBC) ಅಭ್ಯರ್ಥಿಗಳು: 13 ವರ್ಷಗಳು
PWBD (SC/ST) ಅಭ್ಯರ್ಥಿಗಳು: 15 ವರ್ಷಗಳು

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree Engineering

Comments