ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ಆಫೀಸರ್ ಟ್ರೇನಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ07 ಆಗಸ್ಟ್ 2024 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡುವ ಮೂಲಕ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ/ಕಂಪ್ಯೂಟರ್ ಆಧಾರಿತ ಪರೀಕ್ಷೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 43
Officer Trainee(Finance) : 39
Officer Trainee(Co Secy) : 4
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕೊನೆಯ ದಿನಾಂಕಕ್ಕೆ ಅನ್ವಯವಾಗಿ ಗರಿಷ್ಟ 28 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
a) OBC(NCL) ಅಭ್ಯರ್ಥಿಗಳಿಗೆ : 3 ವರ್ಷ
b) SC/ST ಅಭ್ಯರ್ಥಿಗಳಿಗೆ : 5 ವರ್ಷ
c) PwBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments