ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಪವರ್ ಗ್ರಿಡ್ ಕಾರ್ಪೋರೇಶನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿ ಇರುವ73 ಆಫೀಸರ್ ಟ್ರೈನಿ (ಎನ್ವಿರಾನ್ಮೆಂಟ್ ಮ್ಯಾನೇಜ್ಮೆಂಟ್), ಆಫೀಸರ್ ಟ್ರೈನಿ (ಸೋಶಿಯಲ್ ಮ್ಯಾನೇಜ್ಮೆಂಟ್) ಮತ್ತು ಆಫೀಸರ್ ಟ್ರೈನಿ (HR) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸತಕ್ಕದ್ದು. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ನೇಮಕಾತಿ ಅಧಿಸೂಚನೆ ಪ್ರಕಾರ ಡಾಕ್ಯುಮೆಂಟ್ ಪರಿಶೀಲನೆ, ಗುಂಪು ಚರ್ಚೆ, ವೈಯಕ್ತಿಕ ಸಂದರ್ಶನ, ವೈದ್ಯಕೀಯ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 24 ಡಿಸೆಂಬರ್ 2024 ರೊಳಗಾಗಿ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 73
Officer Trainee (Environment Management) - 14
Officer Trainee (Social Management) - 15
Officer Trainee (HR) - 37
Officer Trainee (PR) - 07
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ MBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಇತರ ಅಭ್ಯರ್ಥಿಗಳಿಗೆ: ₹500/- ರೂ
SC/ ST/ PwBD ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC (NCL) ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
PWBD ಅಭ್ಯರ್ಥಿಗಳಿಗೆ: 10 ವರ್ಷಗಳು
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ 40,000/-ರೂ ಗಳಿಂದ 1,60,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments