ಕಲಬುರಗಿ ಜಿಲ್ಲೆಯಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Rukmini Krushna Ganiger | Date:18 ಆಗಸ್ಟ್ 2021

- 2021 ನೇ ಶೈಕ್ಷಣಿಕ ಸಾಲಿಗೆ ಕಲಬುರಗಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನಲ್ಲಿ ಅಗತ್ಯ ಇರುವ ವಿವಿಧ ಕೋರ್ಸ್‌ಗಳ ಅತಿಥಿ ಉಪನ್ಯಾಸಕರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಕುರಿತು ಕಲಬುರಗಿ ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಚಾರ್ಯರಾದ ರಾಘವೇಂದ್ರ ಪಿ.ಆರ್. ರವರು ಪ್ರಕಟಣೆ ಹೊರಡಿಸಿದ್ದಾರೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 31/08/2021 ರೊಳಗಾಗಿ ವಿದ್ಯಾರ್ಹತೆಯ ಪ್ರಮಾಣ ಪತ್ರ ಹಾಗೂ ಬಯೋಡಾಟಾದೊಂದಿಗೆ ಕಲಬುರಗಿ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬಹುದು.
Application Start Date: 18 ಆಗಸ್ಟ್ 2021
Application End Date: 31 ಆಗಸ್ಟ್ 2021
Selection Procedure: - ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
Qualification: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ವಿವಿಧ ಕೋರ್ಸ್‌ಗಳ ವಿಭಾಗದನ್ವಯ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಗರಿಷ್ಠ 60 ವರ್ಷ ಮೀರಿರಬಾರದು.
* ಇತರೆ ಹೆಚ್ಚಿನ ವಿವರಗಳಿಗಾಗಿ ಸಂಸ್ಥೆಯ ಪ್ರಾಂಶುಪಾಲರಾದ ರಾಘವೇಂದ್ರ ಪಿ.ಆರ್. ಇವರ ಮೊಬೈಲ್ ಸಂಖ್ಯೆ 9945350274 ಕ್ಕೆ ಸಂಪರ್ಕಿಸಲು ಕೋರಲಾಗಿದೆ.





Comments