ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ 183 ಐಟಿ ಮ್ಯಾನೇಜರ್, ಲಾ ಮ್ಯಾನೇಜರ್, ಮತ್ತು ಐಟಿ ಆಫೀಸರ್,ರಿಸ್ಕ್ ಮ್ಯಾನೇಜರ್, ಚಾರ್ಟರ್ಡ್ ಅಕೌಂಟೆಂಟ್, ಡಿಜಿಟಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 12-07-2023 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳುB.E/ B.Tech/ MBA/ MCA / MSc ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ನಿಗದಿತ ಶುಲ್ಕವನ್ನು ಪಾವತಿಸಬೇಕಿರುತ್ತದೆ.
1) General ಮತ್ತು OBC ಅಭ್ಯರ್ಥಿಗಳು 1,003/- ರೂಗಳ ಮತ್ತು
2) SC/ST, PH ಅಭ್ಯರ್ಥಿಗಳು 177/-ರೂಗಳ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 25 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯಯೋಮಿತಿಯನ್ನು ಹೊಂದಿರಬೇಕು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ36,000/- ರೂ ಗಳಿಂದ 78,230/- ರೂ ಗಳ ವರೆಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments