ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ 100 ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31-10-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ನಿಗದಿತ ಶುಲ್ಕವನ್ನು ಪಾವತಿಸಬೇಕಿರುತ್ತದೆ.
1) General ಮತ್ತು OBC ಅಭ್ಯರ್ಥಿಗಳು 200/- ರೂಗಳ ಮತ್ತು
2) SC/ST, PH ಅಭ್ಯರ್ಥಿಗಳು 100/-ರೂಗಳ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 20ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಗರಿಷ್ಠ 28 ವರ್ಷ ವಯೋಮಿತಿಯನ್ನು ಮೀರಿರಬಾರದು
ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PWBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಮಾಸಿಕ ವೇತನ ನೀಡಲಾಗುತ್ತದೆ.
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.




Comments