ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ 213 ಆಫೀಸರ್, ಮ್ಯಾನೇಜರ್, ಸೀನಿಯರ್ ಮ್ಯಾನೇಜರ್ ಮತ್ತು ಚೀಫ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 15-09-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ ಖಾಲಿ ಇರುವ 213 ಹುದ್ದೆಗಳ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 15-09-2024 ರವರೆಗೆ ನಿಗದಿಪಡಿಸಲಾಗಿತ್ತು, ಇದೀಗ ಅರ್ಜಿ ಸಲ್ಲಿಸುವ ದಿನಾಂಕವನ್ನು 22-09-2024 ವರೆಗೆ ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಲಿಖಿತ ಪರೀಕ್ಷೆ, ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ : 213
Officer : 56
Manager : 117
Senior Manager : 33
Chief Manager : 7
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ನಿಗದಿತ ಶುಲ್ಕವನ್ನು ಪಾವತಿಸಬೇಕಿರುತ್ತದೆ.
1) General ಮತ್ತು OBC ಅಭ್ಯರ್ಥಿಗಳು 850/- ರೂಗಳ ಮತ್ತು
2) SC/ST, PH ಅಭ್ಯರ್ಥಿಗಳು 100/-ರೂಗಳ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕು,
Officer - 20-32
Manager - 25-35
Senior Manager - 25-38
Chief Manager - 28-40
ವಯೋಮಿತಿ ಸಡಿಲಿಕೆ :
OBC (NCL) ಅಭ್ಯರ್ಥಿಗಳಿಗೆ : 03 ವರ್ಷ
SC/ST ಅಭ್ಯರ್ಥಿಗಳಿಗೆ : 05 ವರ್ಷ
PWBD ಅಭ್ಯರ್ಥಿಗಳಿಗೆ : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರವಾಗಿ ಈ ಕೆಳಗಿನಂತೆ ಮಾಸಿಕ ವೇತನ ನೀಡಲಾಗುತ್ತದೆ.
Officer : Rs.48480-85920/-
Manager : Rs.64820-93960/-
Senior Manager : Rs.85920-105280/-
Chief Manager : Rs.102300-120940/-
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments