ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ರಾಯಚೂರು ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ, ಚಾಲಕ ಮತ್ತು ಸೇವಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ21/12/2023 ರಾತ್ರಿ 11:59 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ: 26
- ಶೀಘ್ರಲಿಪಿಗಾರರು ಗ್ರೇಡ್ 3 : 1
- ಬೆರಳಚ್ಚುಗಾರರು : 8
- ಬೆರಳಚ್ಚು ನಕಲುಗಾರರು : 1
- ಆದೇಶಿಕ ಜಾರಿಕಾರರು : 5
- ಚಾಲಕ : 1
- ಜವಾನ : 10
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಈ ಕೆಳಗಿನಂತೆ ಆಯ್ಕೆ ಮಾಡಿ ಕೊಳ್ಳಲಾಗುತ್ತದೆ.
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ, ಆದೇಶ ಜಾರಿಕಾರ ಹುದ್ದೆಗಳಿಗೆ ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಸಾಮರ್ಥ್ಯ ಪರೀಕ್ಷೆಯಲ್ಲಿ ಗಳಿಸಿದ 1: 5 ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
* ಜವಾನ ಮತ್ತು ಚಾಲಕ ಹುದ್ದೆಗಳಿಗೆ ಎಸ್. ಎಸ್.ಎಲ್.ಸಿ ಪರೀಕ್ಷೆಯಲ್ಲಿ ಪಡೆದ ಗರಿಷ್ಠ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು ನಕಲುಗಾರ ಹುದ್ದೆಗಳಿಗೆ - ಪಿ.ಯು.ಸಿ.(12th) ಅಥವಾ ಡಿಪ್ಲೋಮ (diploma) ವಿದ್ಯಾರ್ಹತೆಯನ್ನು ಹೊಂದಿರಬೇಕು.
* ಆದೇಶ ಜಾರಿಕಾರ, ಸೇವಕ ಮತ್ತು ಚಾಲಕ ಹುದ್ದೆಗಳಿಗೆ -ಎಸ್. ಎಸ್.ಎಲ್.ಸಿ(10th) ವಿದ್ಯಾರ್ಹತೆಯನ್ನು ಹೊಂದಿರಬೇಕು.ಕನ್ನಡ ಓದಲು ಮತ್ತು ಬರೆಯಲು
ತಿಳಿದಿರಬೇಕು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ಪಾವತಿಸಬೇಕು.
* ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ : 200/-
* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ, ಅಂಗವಿಕಲ ಮತ್ತು ಪ್ರವರ್ಗ ಕ್ಕೆ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದ ವಿನಾಯಿತಿ ಇರುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.





Comments