Loading..!

ರಾಯಚೂರು ಜಿಲ್ಲಾ ಪಂಚಾಯತಿಗಳಲ್ಲಿ ಖಾಲಿ ಇರುವ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PUC
Published by: Yallamma G | Date:28 ಅಕ್ಟೋಬರ್ 2023
not found

ರಾಯಚೂರು ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ 6 ತಾಲೂಕಾ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ 22 ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರು ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 10/11/2023. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ. 

No. of posts:  22
Application Start Date:  28 ಅಕ್ಟೋಬರ್ 2023
Application End Date:  10 ನವೆಂಬರ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಮತ್ತು ರೋಸ್ಟರ್ ಮೀಸಲಾತಿ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಲಾಗುವುದು.
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು PUC, ಗ್ರಂಥಾಲಯ ವಿಜ್ಞಾನದಲ್ಲಿ ಪ್ರಮಾಣೀಕರಿಸಿದ ಕೋರ್ಸ್ಅನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು. 
- ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.  

Fee:

 ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಅಭ್ಯರ್ಥಿಗಳಿಗೆ ರೂ 500/- 
* ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 300/- 
* SC/ST/CAT-1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 200/- 
* ವಿಶೇಷ ಚೇತನ ಅಭ್ಯರ್ಥಿಗಳಿಗೆ ರೂ 100/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ 

Employment Type: FULL_TIME
Hiring Organization: KPSC Vaani https://www.kpscvaani.com
Work Location: ರಾಯಚೂರು ಜಿಲ್ಲಾ, KA,
To Download Official Notification
Related Tags: PUC

Comments