ರೈಲ್ವೆ ಬೋಗಿ ನಿರ್ಮಾಣ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ

ಭಾರತ ಸರ್ಕಾರ ರೈಲ್ವೆ ಸಚಿವಾಲಯ, ರೈಲ್ವೆ ನೇಮಕಾತಿ ಮಂಡಳಿಯಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ರೈಲ್ವೆ ಕೋಚ್ ಫ್ಯಾಕ್ಟರಿ ಕಪುರ್ತಲಾದಲ್ಲಿ ಖಾಲಿ ಇರುವ 550 ಪೀಟರ್, ವೆಲ್ಡರ್, ಮೆಕಾನಿಸ್ಟ್, ಪೇಂಟರ್ ಮತ್ತು ಎಲೆಕ್ಟ್ರಿಷನ್ ಸೇರಿದಂತೆ ವಿವಿಧ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ09-ಏಪ್ರಿಲ್- 2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಭಾರತದ ಪ್ರಜೆಯಾಗಿರಬೇಕು.
ಹುದ್ದೆಗಳ ವಿವರ : 550
Fitter : 200
Welder (G&E) : 230
Machinist : 05
Painter (G) : 20
Carpenter : 5
Electrician : 75
AC& Ref. Mechanic : 15
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 15 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 24 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿ ಸಡಿಲಿಕೆ :
OBC ಅಭ್ಯರ್ಥಿಗಳಿಗೆ 3 ವರ್ಷ
SC/ ST ಅಭ್ಯರ್ಥಿಗಳಿಗೆ 5 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments