ಮೈಸೂರಿನಲ್ಲಿರುವ ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮೈಸೂರಿನಲ್ಲಿರುವ ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿಯಮಿತದಲ್ಲಿ ಖಾಲಿ ಇರುವ 21 ಶಾಖಾ ವ್ಯವಸ್ಥಾಪಕರು, ಹಿರಿಯ ನಗದುಗಾರರು, ಲೆಕ್ಕಿಗರು, ಕಂಪ್ಯೂಟರ್ ಮೇಲ್ವಿಚಾರಕರು, ಕಿರಿಯ ಗುಮಾಸ್ತರು ಮತ್ತು ಕಚೇರಿ ಸಹಾಯಕರು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ದಿನಾಂಕ 28/06/2023 ರೊಳಗಾಗಿ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ವಿಳಾಸ :
ಸದಸ್ಯ ಕಾರ್ಯದರ್ಶಿ, ನೇಮಕಾತಿ ಸಮಿತಿ, ದಿ ರೈಲ್ವೆ ಕೋ-ಆಪರೇಟಿವ್ ಬ್ಯಾಂಕ್ ನಿ.
ಶೇಷಾದ್ರಿ ಐಯ್ಯರ್ ರಸ್ತೆ, ಮೈಸೂರು-570001
ಹುದ್ದೆಗಳ ವಿವರ : 21
ಶಾಖಾ ವ್ಯವಸ್ಥಾಪಕರು : 1
ಲೆಕ್ಕಿಗರು : 4
ಹಿರಿಯ ನಗದುಗಾರರು : 1
ಕಂಪ್ಯೂಟರ್ ಮೇಲ್ವಿಚಾರಕರು : 1
ಕಿರಿಯ ಗುಮಾಸ್ತರು : 10
ಕಚೇರಿ ಸಹಾಯಕರು : 4
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ವಿದ್ಯಾರ್ಹತೆಯನ್ನು ಹೊಂದಿರಬೇಕಾಗುತ್ತದೆ.
- ಶಾಖಾ ವ್ಯವಸ್ಥಾಪಕರು, ಹಿರಿಯ ನಗದುಗಾರರು, ಲೆಕ್ಕಿಗರು ಹುದ್ದೆಗಳಿಗೆ ಭಾರತದ ಕಾನೂನಿನ ಅಡಿಯಲ್ಲಿ ಸ್ಥಾಪನೆಯಾದ ವಿಶ್ವವಿದ್ಯಾಲಯದಿಂದ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
- ಕಂಪ್ಯೂಟರ್ ಮೇಲ್ವಿಚಾರಕರು ಹುದ್ದೆಗಳಿಗೆ B.Sc/ BCA/ BE ಇನ್ ಕಂಪ್ಯೂಟರ್ ಸೈನ್ಸ್ ನಲ್ಲಿ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು.
- ಕಿರಿಯ ಗುಮಾಸ್ತರು ಹುದ್ದೆಗಳಿಗೆ PUC ವಿದ್ಯಾರ್ಹತೆಯನ್ನು ಪಡೆದಿರಬೇಕು.
- ಕಚೇರಿ ಸಹಾಯಕರು SSLC ವಿದ್ಯಾರ್ಹತೆಯನ್ನು ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ 1000 /- ರೂ ಅರ್ಜಿ ಶುಲ್ಕವನ್ನು ನಿಆದಿಪಡಿಸಲಾಗಿದೆ.
- SC / ST ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ 500 /- ರೂ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು ಹಾಗೂ
SC / ST ಅಭ್ಯರ್ಥಿಗಳಿಗೆ 40 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ18000/- ರಿಂದ 35400/- ರೂಗಳವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments