Loading..!

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಬಗ್ಗೆ ಅಧಿಸೂಚನೆ ಪ್ರಕಟ
| Date:6 ಆಗಸ್ಟ್ 2019
not found
ರಾಮನಗರ ಜಿಲ್ಲಾ ನ್ಯಾಯಾಲಯ ಘಟಕದ ಅಧೀನ ನ್ಯಾಯಾಲಯಗಳಲ್ಲಿ ಖಾಲಿ ಹಾಗೂ ಹಿಂಬಾಕಿ ಉಳಿದಿರುವ ಶೀಘ್ರಲಿಪಿಗಾರರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ ಲೈನ್ ಮೂಲಕ ಆಹ್ವಾನಿಸಲಾಗಿದೆ.

ಖಾಲಿ ಇರುವ ಹುದ್ದೆಗಳ ವಿವರಗಳು :
I. ಶೀಘ್ರಲಿಪಿಗಾರರ ಹುದ್ದೆಗಳ ಸಂಖ್ಯೆ: 05
No. of posts:  5
Application Start Date:  5 ಆಗಸ್ಟ್ 2019
Application End Date:  30 ಆಗಸ್ಟ್ 2019
Qualification: ಎ) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ.
ಬಿ) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ದರ್ಜೆಯ (ಸೀನಿಯರ್ ಗ್ರೇಡ್) ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ.
ಸಿ) ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯುು ನಡೆಸುವ ಹಿರಿಯ (ಸೀನಿಯರ್ ಗ್ರೇಡ್) ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಯಲ್ಲಿ ತೇರ್ಗಡೆಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಅಥವಾ ಡಿಪ್ಲೋಮಾ ಇನ್
ಸೆಕ್ರೆಟೇರಿಯಲ್/ ಕಮರ್ಷಿಯಲ್ ಪ್ರಾಕ್ಟೀಸ್‍ನಲ್ಲಿ ಕನ್ನಡ ಮತ್ತು ಆಂಗ್ಲ ಭಾಷೆಗಳ ಹಿರಿಯದರ್ಜೆ ಶೀಘ್ರಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Fee: * ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200/-
* ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.100/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇರುತ್ತದೆ.
Age Limit: * ಕನಿಷ್ಠ ವಯೋಮಿತಿ ಃ 18 ವರ್ಷ
* ಗರಿಷ್ಠ ವಯೋಮಿತಿ ಃ ಸಾಮಾನ್ಯ ವರ್ಗ - 35 ವರ್ಷ
- 2ಎ, 2ಬಿ, 3ಎ, 3ಬಿ - 38 ವರ್ಷ
- ಪ.ಜಾ, ಪ.ಪಂ, ಪ್ರವರ್ಗ-1 - 40 ವರ್ಷ
- ವಿಧವೆಯರಿಗೆ, ಮಾಜಿ ಸೈನಿಕರಿಗೆ, ಅಂಗವಿಕಲರಿಗೆ ಹಾಗೂ ಸರ್ಕಾರಿ ಸೇವೆಯಲ್ಲಿರುವವರಿಗೆ ನಿಯಮಾನುಸಾರ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.
Pay Scale: ವೇತನ ಶ್ರೇಣಿ – 27650-650-29600-750-32600-850-36000-950-39800-1100-46400-1250-52650 ಹಾಗೂ ಲಭ್ಯವಿರುವ ಇತರೆ ಭತ್ಯೆಗಳು.
ನೀವು ಮೊಬೈಲ್ ಫೋನುಗಳನ್ನು ಬಾರಿ ರಿಯಾತಿಯೊಂದಿಗೆ amazon ಜಾಲತಾಣದಿಂದ ಖರೀದಿಸಿ

Comments