Loading..!

ರಾಮನಗರ ಜಿಲ್ಲಾ ಪಂಚಾಯತ್ ಇಲ್ಲಿ ಖಾಲಿ ಇರುವ 12 ಕೋ-ಆರ್ಡಿನೇಟರ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:25 ಜನವರಿ 2020
not found
ರಾಮನಗರ ಜಿಲ್ಲಾ ಪಂಚಾಯತ್ ನಲ್ಲಿ 12 ಕೋ-ಆರ್ಡಿನೇಟರ್ ಮತ್ತು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ದಿನಾಂಕ ಫೆಬ್ರವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
No. of posts:  12
Application Start Date:  25 ಜನವರಿ 2020
Application End Date:  10 ಫೆಬ್ರುವರಿ 2020
Work Location:  ರಾಮನಗರ (ಕರ್ನಾಟಕ)
Qualification: ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಡಿಪ್ಲೋಮಾ ಮತ್ತು ಪೋಸ್ಟ್ ಗ್ರಾಜುಯೇಟ್(PG) ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit: ದಿನಾಂಕ ಫೆಬ್ರವರಿ 10,2020 ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಟ 21 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಗರಿಷ್ಟ 45 ವರ್ಷ ವಯೋಮಿತಿ ಮೀರಿರಬಾರದು.
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳಿಗೆ 15,000/-ರಿಂದ 30,000/-ರೂ ವೇತನವನ್ನು ನಿಗದಿಪಡಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಅಲ್ಲಿ ಕೇಳಲಾಗಿರುವ ವಿವರಗಳನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗೆ ತಿಳಿಸಿರುವ ಕಚೇರಿಯ ವಿಳಾಸಕ್ಕೆ ಫೆಬ್ರವರಿ 10,2020ರೊಳಗೆ ತಲುಪುವಂತೆ ಅರ್ಜಿಯನ್ನು ಸಲ್ಲಿಸಬೇಕು.

ಕಚೇರಿಯ ವಿಳಾಸ:
ಉಪನಿರ್ದೇಶಕರ ಕಚೇರಿ,
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,
2ನೇ ಮಹಡಿ ಪಂಚಾಯತ್ ಭವನ,
ಬಿ.ಎಂ ರಸ್ತೆ, ರಾಮನಗರ.

ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಒಧಿಕೊಳ್ಳಬಹುದಾಗಿದೆ
to download official notification Ramanagara Jilla Panchayata Recruitment 2020
to download application form Ramanagara Jilla Panchayata Recruitment 2020
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments