ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಪದವಿ ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 67 ಐಟಿ ಸೆಕ್ಯೂರಿಟಿ ಅಡ್ಮಿನಿಸ್ಟ್ರೇಷನ್, ಐಟಿ ಸಿಸ್ಟಮ್ ಅಡ್ಮಿನಿಸ್ಟ್ರೇಷನ್, ಮತ್ತು ಐಟಿ ಪ್ರಾಜೆಕ್ಟ್ ಅಡ್ಮಿನಿಸ್ಟ್ರೇಷನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 11/07/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು B. E/B. Tech /M. Tech/ LLB/LLM/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಸಾಮಾನ್ಯ ಅಭ್ಯರ್ಥಿಗಳು, OBC, ESW ಅಭ್ಯರ್ಥಿಗಳು 600/-ರೂ ಅರ್ಜಿ ಶುಲ್ಕವನ್ನು ಹಾಗೂ SC/ST/ PwBD ಅಭ್ಯರ್ಥಿಗಳು 100/- ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 23 ವರ್ಷ ಮತ್ತು ಗರಿಷ್ಠ 40 ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು : 3 ವರ್ಷ
SC/ST ಅಭ್ಯರ್ಥಿಗಳು : 5 ವರ್ಷ
PWD ಅಭ್ಯರ್ಥಿಗಳು : 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಿ ವರ್ಗದ ಹುದ್ದೆಗಳಿಗೆ ವಾರ್ಷಿಕವಾಗಿ 36.96 ಲಕ್ಷದಿಂದ 45.84 ಲಕ್ಷದ ವರೆಗೆ ಹಾಗು ಡಿ ವರ್ಗದ ಹುದ್ದೆಗಳಿಗೆ 51.60 ಲಕ್ಷದಿಂದ 57.24 ಲಕ್ಷದವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments