ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(RBI)ದಲ್ಲಿ ಪದವಿ ಪಾಸಾದ ಅಭ್ಯರ್ಥಿಗಳಿಂದ ಗ್ರೇಡ್ 'ಬಿ' ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟ

ಭಾರತೀಯ ರಿಸರ್ವ್ ಬ್ಯಾಂಕ್ ನಲ್ಲಿ ಖಾಲಿ ಇರುವ 294 ಗ್ರೇಡ್ ಬಿ ಹುದ್ದೆಗಳ ಭರ್ತಿಗೆ ಯಾವುದೇ ಪದವಿ ಪಾಸಾದ ಅರ್ಹ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/04/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 294
ಆಫೀಸರ್ ಗ್ರೇಡ್ ಬಿ ಆಫೀಸರ್ (DR)-General : 238
ಆಫೀಸರ್ ಗ್ರೇಡ್ ಬಿ ಆಫೀಸರ್ (DR)-DEPR : 31
ಆಫೀಸರ್ ಗ್ರೇಡ್ ಬಿ ಆಫೀಸರ್ (DR)-DSIM : 25
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿಯನ್ನು ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
* SC/ST/PwBD ಅಭ್ಯರ್ಥಿಗಳಿಗೆ ₹100/-
* GEN/OBC/EWSs ಅಭ್ಯರ್ಥಿಗಳಿಗೆ ₹850/- ಮತ್ತು
* ಸಿಬ್ಬಂದಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ಆಗಿರಬೇಕು ಮತ್ತು ಗರಿಷ್ಠ 30 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 83,254/- ವೇತನವನ್ನು ನಿಗದಿಪಡಿಸಲಾಗಿದೆ.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments