ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೀ., ಬಳ್ಳಾರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ

ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೀ., ಬಳ್ಳಾರಿ ಇಲ್ಲಿ ಖಾಲಿ ಇರುವ 63 ಡೆಪ್ಯೂಟಿ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಟೆಕ್ನಿಕಲ್ ಆಫೀಸರ್, ಮಾರ್ಕೆಟಿಂಗ್ ಆಫೀಸರ್, ಅಕೌಂಟ್ಸ್ ಆಫೀಸರ್, ಮಾರ್ಕೆಟಿಂಗ್ ಸೂಪರಿಂಟೆಂಡೆಂಟ್, ಸೀನಿಯರ್ ಡ್ರೈವರ್, ಜೂನಿಯರ್ ಟೆಕ್ನಿಷಿಯನ್, ಮತ್ತು ಡ್ರೈವರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ07/12/2023 ರೊಳಗಾಗಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ B.com/ Diploma/ PUC/ LLB/ MBA/ SSLC/ B.scಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
* ಪರಿಶಿಷ್ಟ ಜಾತಿ , ಪರಿಶಿಷ್ಠ ಮಂಗಡ , ಪ್ರವರ್ಗ -1 ಅಂಗವಿಕಲ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 750/- (ಬ್ಯಾಂಕ್ ಶುಲ್ಕ ಪ್ರತ್ಯೇಕ).
* ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 1500/- (ಬ್ಯಾಂಕ್ ಶುಲ್ಕ ಪ್ರತ್ಯೇಕ).
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ
- ಪ್ರವರ್ಗ 2ಎ,2ಬಿ .3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ವಿವಿಧ ರೀತಿಯ ಮಾಸಿಕ ವೇತನವನ್ನು ನಿಗದಿಪಡಿಸಿದೆ. ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
-ಈ ನೇಮಕಾತಿಯ ಕುರಿತು ಇನ್ನೂ ಹೆಚ್ಚಿನ ಸವಿವರವಾದ ಮಾಹಿತಿ ಗಾಗಿ ಈ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments