Loading..!

ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೀ., ಬಳ್ಳಾರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Tags: Degree
Published by: Yallamma G | Date:28 ಜನವರಿ 2023
not found

ರಾಯಚೂರು, ಬಳ್ಳಾರಿ, ಕೊಪ್ಪಳ ಮತ್ತು ವಿಜಯನಗರ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನೀ., ಬಳ್ಳಾರಿ ಇಲ್ಲಿ ಖಾಲಿ ಇರುವ 24 ಡೇರಿ ಮೇಲ್ವಿಚಾರಕರು, ಆಡಳಿತ ಸಹಾಯಕರು, ಲೆಕ್ಕ ಸಹಾಯಕ ಮತ್ತು ಕಿರಿಯ ತಾಂತ್ರಿಕರು ಸೇರಿದಂತೆ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭದ ದಿನಾಂಕ 26/01/2023 ಮತ್ತು ಕೊನೆಯ ದಿನಾಂಕ 15/02/2023 ರೊಳಗಾಗಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 24 
ಡೇರಿ ಮೇಲ್ವಿಚಾರಕರು : 6
ಆಡಳಿತ ಸಹಾಯಕ : 6
ಲೆಕ್ಕ ಸಹಾಯಕ : 2
ಕಿರಿಯ ತಾಂತ್ರಿಕರು : 10

No. of posts:  24
Application Start Date:  26 ಜನವರಿ 2023
Application End Date:  15 ಫೆಬ್ರುವರಿ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ 1:5 ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು, ಸಂದರ್ಶನ ಮತ್ತು ಲಿಖಿತ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಒಟ್ಟುಗೂಡಿಸಿ ಮೆರಿಟ್ ಪಟ್ಟಿ ತಯಾರಿಸಲಾಗುವುದು, ಮೆರಿಟ್ ಹಾಗೂ ಮೀಸಲಾತಿಯ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ B.com/ Diploma/ B.E in Electronics/ Electrical/ Mechanical/ SSLC/ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Fee:

* ಪರಿಶಿಷ್ಟ ಜಾತಿ , ಪರಿಶಿಷ್ಠ ಮಂಗಡ , ಪ್ರವರ್ಗ -1 ಅಂಗವಿಕಲ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 500/- (ಬ್ಯಾಂಕ್ ಶುಲ್ಕ ಪ್ರತ್ಯೇಕ).
* ಇತರೆ  ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಶುಲ್ಕ Rs. 1000/- (ಬ್ಯಾಂಕ್ ಶುಲ್ಕ ಪ್ರತ್ಯೇಕ).

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಬಳ್ಳಾರಿ, KA,
To Download the Official Notification
Related Tags: Degree

Comments