Loading..!

ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ, ದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
| Date:22 ಅಕ್ಟೋಬರ್ 2019
not found
ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಬಳ್ಳಾರಿ ಇದರಲ್ಲಿ ಖಾಲಿ ಇರುವ 29 ಹುದ್ದೆಗಳನ್ನು ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ವಿವಿಧ 29 ಹುದ್ದೆಗಳ ನೇಮಕಾತಿ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ನವೆಂಬರ್ 8,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

ಖಾಲಿ ಹುದ್ದೆಗಳ ವಿವರ:

ಸಾರ್ವಜನಿಕ ಸಂಪರ್ಕ ಅಧಿಕಾರಿ- 1 ಹುದ್ದೆ
ಡೇರಿ ಮೇಲ್ವಿಚಾರಕರು ದರ್ಜೆ-1- 6 ಹುದ್ದೆಗಳು
ಆಡಳಿತ ಸಹಾಯಕ ದರ್ಜೆ-3- 6 ಹುದ್ದೆಗಳು
ಲೆಕ್ಕ ಸಹಾಯಕ ದರ್ಜೆ-3- 2 ಹುದ್ದೆಗಳು
ಕಿರಿಯ ತಾಂತ್ರಿಕರು - 10 ಹುದ್ದೆಗಳು
ಮಾರಕಟ್ಟೆ ಸಹಾಯಕರು ದರ್ಜೆ-2- 2 ಹುದ್ದೆಗಳು
ಕೆಮಿಸ್ಟ್ ದರ್ಜೆ-2 - 2 ಹುದ್ದೆಗಳು

ಪ್ರಮುಖ ದಿನಾಂಕಗಳು:
* ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: ಅಕ್ಟೋಬರ್ 1,2019
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ನವೆಂಬರ್ 8,2019 ಸಮಯ ಸಂಜೆ 6 ಗಂಟೆಗೆ
* ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ನವೆಂಬರ್ 8,2019 ಸಂಜೆ 6 ಗಂಟೆಗೆ
Application Start Date:  22 ಅಕ್ಟೋಬರ್ 2019
Application End Date:  8 ನವೆಂಬರ್ 2019
Last Date for Payment:  8 ನವೆಂಬರ್ 2019
Work Location:  ರಾಯಚೂರು, ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ,
Selection Procedure: ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನೀಡಲಾಗುವುದು. ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಅಭ್ಯರ್ಥಿಗಳನ್ನು 1:5ರ ಅನುಪಾತದಲ್ಲಿ ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ಗರಿಷ್ಟ 15 ಅಂಕಗಳನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಯು ಲಿಖಿತ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳನ್ನು ಶೇ.85 ಕ್ಕೆ ಪ್ರಾಪ್ತವಾಗುವ ಅಂಕಗಳ ಜೊತೆಗೆ ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳನ್ನು ಒಟ್ಟುಗೂಡಿಸಿ ಅಂತಿಮ ಅರ್ಹತಾ ಪಟ್ಟಿಯನ್ನು ತಯಾರಿಸಿ ಅರ್ಹತೆ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಅಭ್ಯರ್ಥಿಗಳ ಅರ್ಹತೆಯ ಬಗ್ಗೆ ಒಕ್ಕೂಟದ ನೇಮಕಾತಿ ಪ್ರಾಧಿಕಾರದ ನಿರ್ಣಯವೇ ಅಂತಿಮವಾಗಿರುತ್ತದೆ.
Qualification: ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಸಂಬಂಧಿಸಿದ ಹುದ್ದೆಗಳಿಗೆ ಅಧಿಸೂಚನೆಯಲ್ಲಿ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು. ಯಾವುದೇ ಹುದ್ದೆಗೆ ಸೇವಾನುಭವವನ್ನು ನಿಗದಿಪಡಿಸಿದಾಗ ಅಭ್ಯರ್ಥಿಗಳು ವಿದ್ಯಾರ್ಹತೆ ಹೊಂದಿದ ನಂತರ ಆ ಸೇವಾನುಭವ ಹೊಂದಿರತಕ್ಕದ್ದು.

* ಸಾರ್ವಜನಿಕ ಸಂಪರ್ಕ ಅಧಿಕಾರಿ : ಅಂಗೀಕೃತ ವಿಶ್ವವಿದ್ಯಾಲಯದಿಂದ 1ನೇ ದರ್ಜೆಯಲ್ಲಿ ಎಂ.ಬಿ.ಎ (ಹೆಚ್.ಆರ್‌)/ಎಲ್‌.ಎಲ್‌.ಬಿ.ನಲ್ಲಿ ಪದವಿ ಪಡೆದು ಕನಿಷ್ಠ 5 ವರ್ಷಗಳ ಅನುಭವವನ್ನು ಸಂಬಂಧಿಸಿದ ಕ್ಷೇತ್ರದಲ್ಲಿ ಹೊಂದಿರಬೇಕು. ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ವಿದ್ಯಾರ್ಹತೆ ಪಡೆದವರಿಗೆ ಆದ್ಯತೆ ನೀಡಲಾಗುವುದು.

* ಡೇರಿ ಮೇಲ್ವಿಚಾರಕರು ದರ್ಜೆ-1 : ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿ.ಇ.(ಎಲೆಕ್ಟ್ರಾನಿಕ್ಸ್/ಎಲೆಕ್ಟ್ರಿಕಲ್/ಮೆಕ್ಯಾನಿಕಲ್) ನಲ್ಲಿ ಪ್ರಥಮ ದರ್ಜೆ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ವಿದ್ಯಾರ್ಹತೆ ಪಡೆದವರಿಗೆ ಆದ್ಯತೆ ನೀಡಲಾಗುವುದು.

* ಆಡಳಿತ ಸಹಾಯಕ ದರ್ಜೆ-3 : ಅಂಗೀಕೃತ ವಿಶ್ವವಿದ್ಯಾಲಯದಿಂದ 2ನೇ ದರ್ಜೆಯಲ್ಲಿ ಯಾವುದೇ ಪದವಿ ಪಡೆದು ಕನಿಷ್ಟ 6 ತಿಂಗಳ ಅವಧಿಯ ಕಂಪ್ಯೂಟರ್ ಅಪ್ಲಿಕೇಷನ್ಸ್‌ನಲ್ಲಿ ಡಿಪ್ಲೋಮಾ ಹಾಗೂ ಕನ್ನಡ ನುಡಿ ತಂತ್ರಜ್ಞಾನ ಪಡೆದಿರಬೇಕು. ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ವಿದ್ಯಾರ್ಹತೆ ಪಡೆದವರಿಗೆ ಆದ್ಯತೆ ನೀಡಲಾಗುವುದು.

* ಲೆಕ್ಕ ಸಹಾಯಕ ದರ್ಜೆ-3 : ಅಂಗೀಕೃತ ವಿಶ್ವವಿದ್ಯಾಲಯದಿಂದ 2ನೇ ದರ್ಜೆಯಲ್ಲಿ ವಾಣಿಜ್ಯ ಪದವಿಯೊಂದಿಗೆ ಲೆಕ್ಕ ಪತ್ರ ನಿರ್ವಹಣೆಯಲ್ಲಿ ಕಂಪ್ಯೂಟರ್‌ ಪರಿಣತಿ ಒಳಗೊಂಡು ಕನಿಷ್ಟ 6 ತಿಂಗಳ ಅವಧಿಯ ಕಂಪ್ಯೂಟರ್ ಅಪ್ಲಿಕೇಶನ್ಸ್‌ನಲ್ಲಿ ಡಿಪ್ಲೋಮಾ ಪಡೆದಿರಬೇಕು.ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ವಿದ್ಯಾರ್ಹತೆ ಪಡೆದವರಿಗೆ ಆದ್ಯತೆ ನೀಡಲಾಗುವುದು.

* ಕಿರಿಯ ತಾಂತ್ರಿಕರು ಎಸ್‌.ಎಸ್‌.ಎಲ್‌.ಸಿ. ವಿದ್ಯಾರ್ಹತೆಯೊಂದಿಗೆ ಕರ್ನಾಟಕ ಸರ್ಕಾರದಿಂದ ಅಂಗೀಕೃತಗೊಂಡ ಕೈಗಾರಿಕಾ ತರಬೇತಿ ಸಂಸ್ಥೆಯಿಂದ (ಐ.ಟಿ.ಐ) ಮೆಕ್ಯಾನಿಕಲ್/ಎಲೆಕ್ಟ್ರಿಕಲ್/ಎಲೆಕ್ಟ್ರಾನಿಕ್ಸ್/ರೆಫ್ರಿಜರೇಶನ್ ಮತ್ತು ಎ.ಸಿ ವಿಷಯಗಳಲ್ಲಿ 2 ವರ್ಷದ ಕೋರ್ಸ್‌ನಲ್ಲಿ ಉತ್ತೀರ್ಣರಾಗಿರಬೇಕು.
ಅಥವಾ
ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಹತೆಯೊಂದಿಗೆ ಕರ್ನಾಟಕ ಸರ್ಕಾರದಿಂದ ದ್ವಿತೀಯ/ಪ್ರಥಮ ದರ್ಜೆ ಬಾಯ್ಲರ್ ಅಟೆಂಡೆಂಟ್ ಸರ್ಟಿಫಿಕೇಟ್ ಪಡೆದಿರಬೇಕು. ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ವಿದ್ಯಾರ್ಹತೆ ಪಡೆದವರಿಗೆ ಆದ್ಯತೆ ನೀಡಲಾಗುವುದು.

* ಮಾರಕಟ್ಟೆ ಸಹಾಯಕರು ದರ್ಜೆ-2 ಅಂಗೀಕೃತ ವಿಶ್ವವಿದ್ಯಾಲಯದಿಂದ ಬಿಬಿಎ(ಮಾರ್ಕೆಟಿಂಗ್)/ಬಿಬಿಎಂ (ಮಾರ್ಕೆಟಿಂಗ್)/ಬಿ.ಕಾಂ ಪದವಿ ಪಡೆದು ಕಂಪ್ಯೂಟರ್ ಪರಿಣತಿ ಒಳಗೊಂಡು ಕನಿಷ್ಟ 6 ತಿಂಗಳ ಅವಧಿಯ ಕಂಪ್ಯೂಟರ್ ಅಪ್ಲಿಕೇಶನ್ಸ್‌ನಲ್ಲಿ ಡಿಪ್ಲೋಮಾ ಪಡೆದಿರಬೇಕು. ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ವಿದ್ಯಾರ್ಹತೆ ಪಡೆದವರಿಗೆ ಆದ್ಯತೆ ನೀಡಲಾಗುವುದು.

* ಕೆಮಿಸ್ಟ್ ದರ್ಜೆ-2 : ಅಂಗೀಕೃತ ವಿಶ್ವವಿದ್ಯಾಲಯದಿಂದ 1ನೇ ದರ್ಜೆಯಲ್ಲಿ ಬಿ.ಎಸ್‌.ಸಿ ರಾಸಾಯನಿಕ ಶಾಸ್ತ್ರ/ಮೈಕ್ರೋಬಯಲಾಜಿಯಲ್ಲಿ ಪದವಿ ಪಡೆದಿರಬೇಕು. ಕನಿಷ್ಟ 6 ತಿಂಗಳ ಅವಧಿಯ ಕಂಪ್ಯೂಟರ್ ಅಪ್ಲಿಕೇಶನ್ಸ್‌ನಲ್ಲಿ ಡಿಪ್ಲೋಮಾ ಹಾಗೂ ಕನ್ನಡ ನುಡಿ ತಂತ್ರಜ್ಞಾನ ಪಡೆದಿರಬೇಕು. ಡಿಪ್ಲೋಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ವಿದ್ಯಾರ್ಹತೆ ಪಡೆದವರಿಗೆ ಆದ್ಯತೆ ನೀಡಲಾಗುವುದು.
Fee: * ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಅಂಗವಿಕಲರು, ಮಾಜಿ ಸೈನಿಕರು ಹಾಗೂ ಪ್ರವರ್ಗ-1 ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ-400/-ರೂ ಜೊತೆಗೆ ಬ್ಯಾಂಕ್ ವೆಚ್ಚ ಪ್ರತ್ಯೇಕ
* ಇತರೆ ವರ್ಗದ ಅಭ್ಯರ್ಥಿಗಳು ಪಾವತಿಸಬೇಕಾದ ಅರ್ಜಿ ಶುಲ್ಕ-800/-ರೂ ಜೊತೆಗೆ ಬ್ಯಾಂಕ್ ವೆಚ್ಚ ಪ್ರತ್ಯೇಕ

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ನವೆಂಬರ್ 8, 2019ರೊಳಗೆ ಡೆಬಿಟ್/ಕ್ರೆಡಿಟ್/ಆನ್‌ಲೈನ್ ಮೂಲಕ ಮಾತ್ರ ಪಾವತಿಸತಕ್ಕದ್ದು.
Age Limit: ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ನವೆಂಬರ್ 8,2019ರಂದು ಕನಿಷ್ಟ /ಗರಿಷ್ಟ ವಯೋಮಿತಿ ಈ ಕೆಳಕಂಡಂತೆ ಇರತಕ್ಕದ್ದು.
* ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 : ಕನಿಷ್ಟ ವಯೋಮಿತಿ-18, ಗರಿಷ್ಟ ವಯೋಮಿತಿ- 40
* ಪ್ರವರ್ಗ-2ಎ,2ಬಿ,3ಎ ಮತ್ತು 3ಬಿ : ಕನಿಷ್ಟ ವಯೋಮಿತಿ- 18, ಗರಿಷ್ಟ ವಯೋಮಿತಿ- 38
* ಸಾಮಾನ್ಯ ಅಭ್ಯರ್ಥಿಗಳಿಗೆ : ಕನಿಷ್ಟ ವಯೋಮಿತಿ- 18, ಗರಿಷ್ಟ ವಯೋಮಿತಿ- 35
* ಮಾಜಿ ಸೈನಿಕರಿಗೆ ಅವರು ಸೇನೆಯಲ್ಲಿ ಸೇವೆ ಸಲ್ಲಿಸಿರುವ ಅವಧಿಗೆ ಹಾಗೂ ಅಂಗವಿಕಲರು ಮತ್ತು ವಿಧವೆಯರಿಗೆ 10 ವರ್ಷಗಳ ಅವಧಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
Pay Scale: * ಸಾರ್ವಜನಿಕ ಸಂಪರ್ಕ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 43,100/- ರಿಂದ 83,900/-ರೂ,
* ಡೇರಿ ಮೇಲ್ವಿಚಾರಕರು ದರ್ಜೆ-1 ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 40,900/- ರಿಂದ 78,200/-ರೂ,
* ಆಡಳಿತ ಸಹಾಯಕ ದರ್ಜೆ-3,ಲೆಕ್ಕ ಸಹಾಯಕ ದರ್ಜೆ-3 ಮತ್ತು ಕಿರಿಯ ತಾಂತ್ರಿಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 21,400/- ರಿಂದ 42,000/-ರೂ,
* ಮಾರಕಟ್ಟೆ ಸಹಾಯಕರು ದರ್ಜೆ-2 ಮತ್ತು ಕೆಮಿಸ್ಟ್ ದರ್ಜೆ-2 ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/-ರಿಂದ 52,650/-ರೂ ವೇತನವನ್ನು ನೀಡಲಾಗುವುದು.
KPSC ಯಿಂದ ಅದಿಸೂಚಿಸಲಾಗುವ FDA ಮತ್ತು SDA ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments