ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ಮುಂಬೈನ ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 378 ಅಕೌಂಟ್ಸ್ ಎಸ್ಎಕ್ಯುಟಿವ್, ಟೆಕ್ನಿಷಿಯನ್ ಅಪ್ರೆಂಟಿಸ್ (ಕೆಮಿಕಲ್), ಟೆಕ್ನಿಷಿಯನ್ ಅಪ್ರೆಂಟಿಸ್ (ಕಂಪ್ಯೂಟರ್), ಅಟೆಂಡೆಂಟ್ ಆಪರೇಟರ್, ಬಾಯಿಲೇರ್ ಅಟೆಂಡೆಂಟ್, ಎಲೆಕ್ಟ್ರಿಷಿಯನ್ ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊನೆಯ ದಿನಾಂಕ 24 ಡಿಸೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PUC, Diploma, B.Com, BBA, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 25 ವರ್ಷ ವಯೋಮಿತಿಗಳನ್ನು ಮೀರಿರಬಾರದು.'
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 7,000/- ರೂ ಗಳಿಂದ 9,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments