ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ಮುಂಬೈನ ರಾಷ್ಟ್ರೀಯ ಕೆಮಿಕಲ್ಸ್&ಫರ್ಟಿಲೈಸರ್ಸ್ ಲಿಮಿಟೆಡ್ ನ ವಿವಿಧ ವಿಭಾಗಗಳಲ್ಲಿ 25 ಮ್ಯಾನೇಜಮೆಂಟ್ ಟ್ರೇನಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 01/12/2023 ರೊಳಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಒಟ್ಟು ಹುದ್ದೆಗಳ ವಿವರ: 25
ಮ್ಯಾನೇಜಮೆಂಟ್ ಟ್ರೇನಿ (ಮಾಟೆರಿಲ್ಸ್) - 23
ಮ್ಯಾನೇಜಮೆಂಟ್ ಟ್ರೇನಿ (ಲೀಗಲ್) - 02
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು BE / B Tech./ Law ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಂಗವಿಕಲ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ಮತ್ತು ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ಓಬಿಸಿ ಅಭ್ಯರ್ಥಿಗಳಿಗೆ 30 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 32 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 37 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 30,000/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments