ರಾಷ್ಟ್ರೀಯ ರಸಗೊಬ್ಬರ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ದೇಶದ ಪ್ರಮುಖ ರಸಗೊಬ್ಬರ ಮತ್ತು ರಾಸಾಯನಿಕ ಉತ್ಪಾದನಾ ಕಂಪನಿಯಾಗಿರುವ ರಾಷ್ಟ್ರೀಯ ಕೆಮಿಕಲ್ಸ್ & ಫರ್ಟಿಲೈಸರ್ಸ್ ಲಿಮಿಟೆಡ್ (RCFL) ನಲ್ಲಿ ಖಾಲಿ ಇರುವ 378 ಗ್ರಾಜುವೇಟ್ ಅಪ್ರೆಂಟಿಸ್, ಟೆಕ್ನಿಸಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತದಾಧ್ಯಂತ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಮೆರಿಟ್ ಪಟ್ಟಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು
ಹುದ್ದೆಗಳ ವಿವರ : 378
Graduate Apprentice
Accounts Executive : 51
Secretarial Assistant : 96
Recruitment Executive (HR) : 35
Technician Apprentice
Diploma Chemical : 20
Diploma Civil : 14
Diploma Computer : 6
Diploma Electrical : 10
Diploma Instrumentation : 20
Diploma Mechanical : 20
Trade Apprentice
Attendant Operator (Chemical Plant) : 74
Boiler Attendant : 3
Electrician :4
Horticulture Assistant : 6
Instrument Mechanic (Chemical Plant) :3
Laboratory Assistant (Chemical Plant) : 14
Medical Laboratory Technician (Pathology) : 2
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ PUC/ B.Com/ Diploma/ B.Sc/ BBA ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಸವಿವರವಾದ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷ ಮತ್ತು ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಮೀಸಲಾತಿ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು.
Graduate apprentices : 9000/-
Technician apprentices : 8000/-
Trade Apprentice : 7000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments