ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಇಮಾರತ್ ಸಂಶೋಧನಾ ಕೇಂದ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ(DRDO)ಯ ಇಮಾರತ್ ಸಂಶೋಧನಾ ಕೇಂದ್ರದಲ್ಲಿ ಖಾಲಿ ಇರುವ 200 ಗ್ರಾಜುಯೇಟ್ ಅಪ್ರೆಂಟಿಸ್, ಟೆಕ್ನಿಷಿಯನ್ ಅಪ್ರೆಂಟಿಸ್ ಮತ್ತು ಟ್ರೇಡ್ ಅಪ್ರೆಂಟಿಸ್ ಟ್ರೈನಿಗಳು ಸೇರಿದಂತೆ ವಿವಿಧ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಯ ವರೆಗೆ ಅಪ್ರೆಂಟಿಸ್ ಗಳಾಗಿ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಪೆರಿಟಿ ಪಟ್ಟಿಯನ್ನು ತಯಾರಿಸಿ ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಹುದ್ದೆಗಳ ವಿವರ : 200
Graduate Apprentice : 40
Technician Apprentice : 40
Trade Apprentice : 120
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments