ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 25 ಸಮಾಲೋಚಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Hanamant Katteppanavar | Date:14 ನವೆಂಬರ್ 2020

ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಲ ಜೀವನ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್
(ಗ್ರಾಮೀಣ) ಯೋಜನೆಯಡಿ ಕೇಂದ್ರ ಕಛೇರಿ ಹಾಗೂ ಜಿಲ್ಲೆಗಳಲ್ಲಿ ಖಾಲಿಯಿರುವ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ವಿವಿಧ 24 ಸಮಾಲೋಚಕ ಹುದ್ದೆಗಳನ್ನು ನೇಮಿಸಿಕೊಳ್ಳಲು ಅರ್ಜಿ ಕರೆಯಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ನವೆಂಬರ್ 30,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಾಗಿರುತ್ತದೆ.
No. of posts: 24
Application End Date: 30 ನವೆಂಬರ್ 2020
Work Location: ಕರ್ನಾಟಕ
Selection Procedure: ಅಭ್ಯರ್ಥಿಗಳಿಗೆ ಮೊದಲು ಸಂದರ್ಶನದ ಮೂಲಕ ಲಿಖಿತ ಪರೀಕ್ಷೆಗೆ ಆಯ್ಕೆ ಮಾಡಿ ಲಿಖಿತ ಪರೀಕ್ಷಾ ಫಲಿತಾಂಶ ಆದರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವದು.
Qualification:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳು ಸಿವಿಲ್ ಇಂಜಿನಿಯರಿಂಗ್, MBA, ಗ್ರಾಜುಯೇಟ್ ಇನ್ ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ, MCA, M.sc, BE, ಪದವಿ, ಎಂಎ ಮತ್ತು ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:
ಹುದ್ದೆಗಳ ನೇಮಕಾತಿಯ ನಿಯಮಕ್ಕನುಸಾರ ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Pay Scale:
ಹುದ್ದೆಗಳಿಗನುಗುಣವಾಗಿ, ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 22,000/- ರಿಂದ 1,00,000/-ರೂ ಗಳ ವೇತನ ನಿಗದಿಪಡಿಸಲಾಗಿದೆ.
ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.





Comments