ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕರ್ನಾಟಕ (RDPR)ನೇಮಕಾತಿ 2025: ಸಮಾಲೋಚಕರು ಮತ್ತು ಡೇಟಾ ವಿಶ್ಲೇಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೀಗ ಸಿಹಿ ಸುದ್ದಿ! ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ. ಉತ್ಸಾಹಿ ಮತ್ತು ಅರ್ಹ ಭಾರತದ ಅಭ್ಯರ್ಥಿಗಳಿಂದ ಮಾತ್ರ ಅರ್ಜಿಯನ್ನು ಆಹ್ವಾನಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೂ ಮೊದಲು ಇ-ಮೇಲ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಕರ್ನಾಟಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿನ ಕೇಂದ್ರ ಸರ್ಕಾರದ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ಯೋಜೆನೆಯ ಅಡಿಯಲ್ಲಿ ಸಮಾಲೋಚಕರು ಮತ್ತು ವಿಶ್ಲೇಷಕರು ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದ್ದು ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನಾಲ್ಕು ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು 07-ನವೆಂಬರ್-2025 ರಂದು ಸಂಜೆ 05:30 ರೊಳಗಾಗಿ ಇ-ಮೇಲ್ ಮುಖಾಂತರ ಅರ್ಜಿ ಸಲ್ಲಿಸಬಹುದು.
ಕರ್ನಾಟಕದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಇಲ್ಲಿ ನಾವು ಪ್ರತಿ ಹುದ್ದೆಯ ವಿವರ, ಅರ್ಹತೆಗಳು, ವೇತನ ಮಾಹಿತಿ ಮತ್ತು ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಸರಳವಾಗಿ ವಿವರಿಸಿದ್ದೇವೆ. ಆದರೆ ಯಾವ ವಿಭಾಗದಲ್ಲಿ ಎಷ್ಟು ಹುದ್ದೆಗಳಿವೆ ಮತ್ತು ನಿಮಗೆ ಯಾವುದು ಸರಿಹೊಂದುತ್ತದೆ ಎಂಬುದನ್ನು ತಿಳಿಯುವ ಮುನ್ನ, ಈ ನೇಮಕಾತಿಗೆ ಇರುವ ಒಂದು ವಿಶೇಷ ನಿಯಮದ ಬಗ್ಗೆ ತಿಳಿಯಬೇಕಿದೆ...
📌 ಮುಖ್ಯ ಮಾಹಿತಿಗಳು :
ಸಂಸ್ಥೆಯ ಹೆಸರು : ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ
ಹುದ್ದೆಗಳ ಸಂಖ್ಯೆ: 05
ಉದ್ಯೋಗ ಸ್ಥಳ: ಕರ್ನಾಟಕ
ಹುದ್ದೆಯ ಹೆಸರು: ಸಮಾಲೋಚಕರು ಮತ್ತು ವಿಶ್ಲೇಷಕರು
ಸ್ಟೈಫಂಡ್: ನೇಮಕಾತಿ ನಿಯಮಾನುಸಾರ 




Comments